Ephesians · chapter 2 · verse 22
Ephesians 2:22 in Kannada
ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
Aatanalli neevu saha aatmana moolakavaagi devarige nivaasasthaanavaaguvante ottaagi kattalpaduttaa iddeeri.
Ephesians 2:22 in English
- King James Version (KJV)
- In whom ye also are builded together for an habitation of God through the Spirit.
- World English Bible (WEB)
- in whom you also are built together for a habitation of God in the Spirit.
- American Standard Version (ASV)
- in whom ye also are builded together for a habitation of God in the Spirit.
- Bible in Basic English (BBE)
- In whom you, with the rest, are united together as a living-place of God in the Spirit.
- Darby Translation (DBY)
- in whom ye also are built together for a habitation of God in [the] Spirit.
- Webster's Bible (WBS)
- In whom ye also are built together, for a habitation of God through the Spirit.
- Young's Literal Translation (YLT)
- in whom also ye are builded together, for a habitation of God in the Spirit.
Read in context
- 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
- 21ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
Cross references
- 1 Peter 2:4–5 1 ಪೇತ್ರನು 2:4–5ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- John 17:21–23 ಯೋಹಾನನು 17:21–23ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- John 14:17–23 ಯೋಹಾನನು 14:17–23ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು. ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- 1 John 4:13 1 ಯೋಹಾನನು 4:13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Romans 8:9–11 ರೋಮಾಪುರದವರಿಗೆ 8:9–11ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.