Ephesians · chapter 2 · verse 6
Ephesians 2:6 in Kannada
ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
Nammannu aatana kooda ebbisi krista yesuvinalli aatanondige para lokada sthalagalalli koodrisiddaane.
Ephesians 2:6 in English
- King James Version (KJV)
- And hath raised [us] up together, and made [us] sit together in heavenly [places] in Christ Jesus:
- World English Bible (WEB)
- and raised us up with him, and made us to sit with him in the heavenly places in Christ Jesus,
- American Standard Version (ASV)
- and raised us up with him, and made us to sit with him in the heavenly [places], in Christ Jesus:
- Bible in Basic English (BBE)
- So that we came back from death with him, and are seated with him in the heavens, in Christ Jesus;
- Darby Translation (DBY)
- and has raised [us] up together, and has made [us] sit down together in the heavenlies in Christ Jesus,
- Webster's Bible (WBS)
- And hath raised [us] up together, and made [us] sit together in heavenly [places] , in Christ Jesus:
- Young's Literal Translation (YLT)
- and did raise [us] up together, and did seat [us] together in the heavenly [places] in Christ Jesus,
Read in context
- 4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
- 5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- 6ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
- 7ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- 8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
Cross references
- Colossians 3:1–3 ಕೊಲೊಸ್ಸೆಯವರಿಗೆ 3:1–3ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Colossians 2:12–13 ಕೊಲೊಸ್ಸೆಯವರಿಗೆ 2:12–13ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ. ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- Romans 6:4–5 ರೋಮಾಪುರದವರಿಗೆ 6:4–5ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- John 17:21–26 ಯೋಹಾನನು 17:21–26ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು. ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ. ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು. ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- Revelation 3:20–21 ಪ್ರಕಟನೆ 3:20–21ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು. ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- Ephesians 1:19–20 ಎಫೆಸದವರಿಗೆ 1:19–20ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Luke 22:29–30 ಲೂಕನು 22:29–30ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Matthew 26:29 ಮತ್ತಾಯನು 26:29ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.