Ephesians · chapter 3 · verse 13
Ephesians 3:13 in Kannada
ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
Aadadarinda nimma nimitta nana guntaada kashtagaligaagi neevu dhairyagedabaara dendu naanu apekshisuttene. Avu nimma gauravavaagive.
Ephesians 3:13 in English
- King James Version (KJV)
- Wherefore I desire that ye faint not at my tribulations for you, which is your glory.
- World English Bible (WEB)
- Therefore I ask that you may not lose heart at my troubles for you, which are your glory.
- American Standard Version (ASV)
- Wherefore I ask that ye may not faint at my tribulations for you, which are your glory.
- Bible in Basic English (BBE)
- For this reason it is my prayer that you may not become feeble because of my troubles for you, which are your glory.
- Darby Translation (DBY)
- Wherefore I beseech [you] not to faint through my tribulations for you, which is your glory.
- Webster's Bible (WBS)
- Wherefore I desire that ye faint not at my tribulations for you, which is your glory.
- Young's Literal Translation (YLT)
- wherefore, I ask [you] not to faint in my tribulations for you, which is your glory.
Read in context
- 11ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
- 12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
- 13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
- 14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
- 15ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
Cross references
- 2 Thessalonians 3:13 2 ಥೆಸಲೊನೀಕದವರಿಗೆ 3:13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 2 Corinthians 1:6 2 ಕೊರಿಂಥದವರಿಗೆ 1:6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
- Isaiah 40:30–31 ಯೆಶಾಯ 40:30–31ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Philippians 1:12–14 ಫಿಲಿಪ್ಪಿಯವರಿಗೆ 1:12–14ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ. ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- Ephesians 3:1 ಎಫೆಸದವರಿಗೆ 3:1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Deuteronomy 20:3 ಧರ್ಮೋಪದೇಶಕಾಂಡ 20:3ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ;
- Zephaniah 3:16 ಚೆಫನ್ಯ 3:16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
- Hebrews 12:3–5 ಇಬ್ರಿಯರಿಗೆ 12:3–5ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ. ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ. ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- 1 Thessalonians 3:2–4 1 ಥೆಸಲೊನೀಕದವರಿಗೆ 3:2–4ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು. ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.