Ephesians · chapter 4 · verse 26
Ephesians 4:26 in Kannada
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
Kopamaadabekaadaroo paapa maadabediri; sooryanu muluguvadakkinta munche nimma sittu teerali;
Ephesians 4:26 in English
- King James Version (KJV)
- Be ye angry, and sin not: let not the sun go down upon your wrath:
- World English Bible (WEB)
- “Be angry, and don’t sin.” Don’t let the sun go down on your wrath,
- American Standard Version (ASV)
- Be ye angry, and sin not: let not the sun go down upon your wrath:
- Bible in Basic English (BBE)
- Be angry without doing wrong; let not the sun go down on your wrath;
- Darby Translation (DBY)
- Be angry, and do not sin; let not the sun set upon your wrath,
- Webster's Bible (WBS)
- Be ye angry, and sin not: let not the sun go down upon your wrath:
- Young's Literal Translation (YLT)
- be angry and do not sin; let not the sun go down upon your wrath,
Read in context
- 24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- 25ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- 26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- 27ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- 28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
Cross references
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- Psalm 37:8 ಕೀರ್ತನೆಗಳು 37:8ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
- Ephesians 4:31–32 ಎಫೆಸದವರಿಗೆ 4:31–32ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Proverbs 19:11 ಜ್ಞಾನೋಕ್ತಿಗಳು 19:11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
- Romans 12:19–21 ರೋಮಾಪುರದವರಿಗೆ 12:19–21ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Nehemiah 5:6–13 ನೆಹೆಮೀಯ 5:6–13ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು. ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು. ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು. ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ. ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು. ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು. ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು. ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- Exodus 32:21–22 ವಿಮೋಚನಕಾಂಡ 32:21–22ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.