Ephesians · chapter 4 · verse 7
Ephesians 4:7 in Kannada
ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
Aadare kristanu anugrahisida daanada alate ganusaaravaagi nammalli pratiyobbanige krupeyu kodalpattitu.
Ephesians 4:7 in English
- King James Version (KJV)
- But unto every one of us is given grace according to the measure of the gift of Christ.
- World English Bible (WEB)
- But to each one of us, the grace was given according to the measure of the gift of Christ.
- American Standard Version (ASV)
- But unto each one of us was the grace given according to the measure of the gift of Christ.
- Bible in Basic English (BBE)
- But to every one of us has grace been given in the measure of the giving of Christ.
- Darby Translation (DBY)
- But to each one of us has been given grace according to the measure of the gift of the Christ.
- Webster's Bible (WBS)
- But to every one of us is given grace according to the measure of the gift of Christ.
- Young's Literal Translation (YLT)
- and to each one of you was given the grace, according to the measure of the gift of Christ,
Read in context
- 5ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
- 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
- 7ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
- 8ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
- 9(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
Cross references
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- 1 Corinthians 12:7–11 1 ಕೊರಿಂಥದವರಿಗೆ 12:7–11ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Ephesians 3:2 ಎಫೆಸದವರಿಗೆ 3:2ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ
- Romans 12:6–8 ರೋಮಾಪುರದವರಿಗೆ 12:6–8ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- 1 Corinthians 12:28–30 1 ಕೊರಿಂಥದವರಿಗೆ 12:28–30ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- Ephesians 4:8–14 ಎಫೆಸದವರಿಗೆ 4:8–14ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು. ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Matthew 25:15 ಮತ್ತಾಯನು 25:15ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- 2 Corinthians 10:13–15 2 ಕೊರಿಂಥದವರಿಗೆ 10:13–15ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ. ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.