Ephesians · chapter 5 · verse 1
Ephesians 5:1 in Kannada
ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
Aadadarinda neevu priyaraada makkalige takka haage devarannu anusarisuva varaagirri.
Ephesians 5:1 in English
- King James Version (KJV)
- Be ye therefore followers of God, as dear children;
- World English Bible (WEB)
- Be therefore imitators of God, as beloved children.
- American Standard Version (ASV)
- Be ye therefore imitators of God, as beloved children;
- Bible in Basic English (BBE)
- Let it then be your desire to be like God, as well-loved children;
- Darby Translation (DBY)
- Be ye therefore imitators of God, as beloved children,
- Webster's Bible (WBS)
- Be ye therefore followers of God, as dear children;
- Young's Literal Translation (YLT)
- Become, then, followers of God, as children beloved,
Read in context
- 1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- 2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
Cross references
- 1 John 4:11 1 ಯೋಹಾನನು 4:11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- 1 Peter 1:15–16 1 ಪೇತ್ರನು 1:15–16ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- Ephesians 4:32 ಎಫೆಸದವರಿಗೆ 4:32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- Luke 6:35–36 ಲೂಕನು 6:35–36ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ, ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- Leviticus 11:45 ಯಾಜಕಕಾಂಡ 11:45ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- 1 John 3:1–2 1 ಯೋಹಾನನು 3:1–2ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.