Ephesians · chapter 5 · verse 17
Ephesians 5:17 in Kannada
ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
Buddiheenaraagi nadeyade kartana chittavenembadannu vichaarisi tilidavaraagirri.
Ephesians 5:17 in English
- King James Version (KJV)
- Wherefore be ye not unwise, but understanding what the will of the Lord [is].
- World English Bible (WEB)
- Therefore, don’t be foolish, but understand what the will of the Lord is.
- American Standard Version (ASV)
- Wherefore be ye not foolish, but understand what the will of the Lord is.
- Bible in Basic English (BBE)
- For this reason, then, do not be foolish, but be conscious of the Lord's pleasure.
- Darby Translation (DBY)
- For this reason be not foolish, but understanding what [is] the will of the Lord.
- Webster's Bible (WBS)
- Wherefore be ye not unwise, but understanding what the will of the Lord [is] .
- Young's Literal Translation (YLT)
- because of this become not fools, but — understanding what [is] the will of the Lord,
Read in context
- 15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- 16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
- 17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- 18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- 19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
Cross references
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- 1 Thessalonians 5:18 1 ಥೆಸಲೊನೀಕದವರಿಗೆ 5:18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- Colossians 1:9 ಕೊಲೊಸ್ಸೆಯವರಿಗೆ 1:9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- 1 Peter 4:2 1 ಪೇತ್ರನು 4:2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- 1 Thessalonians 4:1–3 1 ಥೆಸಲೊನೀಕದವರಿಗೆ 4:1–3ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ. ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Psalm 111:10 ಕೀರ್ತನೆಗಳು 111:10ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.