Ephesians · chapter 5 · verse 26
Ephesians 5:26 in Kannada
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
Aatanu adannu vaakyavemba neerininda toledu pratishthisi shuddha maadiddallade
Ephesians 5:26 in English
- King James Version (KJV)
- That he might sanctify and cleanse it with the washing of water by the word,
- World English Bible (WEB)
- that he might sanctify her, having cleansed her by the washing of water with the word,
- American Standard Version (ASV)
- that he might sanctify it, having cleansed it by the washing of water with the word,
- Bible in Basic English (BBE)
- So that he might make it holy, having made it clean with the washing of water by the word,
- Darby Translation (DBY)
- in order that he might sanctify it, purifying [it] by the washing of water by [the] word,
- Webster's Bible (WBS)
- That he might sanctify and cleanse it with the washing of water by the word,
- Young's Literal Translation (YLT)
- that he might sanctify it, having cleansed [it] with the bathing of the water in the saying,
Read in context
- 24ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- 25ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
- 26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- 27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- 28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
Cross references
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- John 15:3 ಯೋಹಾನನು 15:3ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- John 17:17–19 ಯೋಹಾನನು 17:17–19ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ. ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Titus 3:5–7 ತೀತನಿಗೆ 3:5–7ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- 1 Peter 1:22–23 1 ಪೇತ್ರನು 1:22–23ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- Ephesians 6:17 ಎಫೆಸದವರಿಗೆ 6:17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
- 1 John 5:6 1 ಯೋಹಾನನು 5:6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.