Ephesians · chapter 5 · verse 30
Ephesians 5:30 in Kannada
ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
Naavu aatana dehada angagaloo maansavoo elubugaloo aagiddeve.
Ephesians 5:30 in English
- King James Version (KJV)
- For we are members of his body, of his flesh, and of his bones.
- World English Bible (WEB)
- because we are members of his body, of his flesh and bones.
- American Standard Version (ASV)
- because we are members of his body.
- Bible in Basic English (BBE)
- Because we are parts of his body.
- Darby Translation (DBY)
- for we are members of his body; [we are of his flesh, and of his bones.]
- Webster's Bible (WBS)
- For we are members of his body, of his flesh, and of his bones.
- Young's Literal Translation (YLT)
- because members we are of his body, of his flesh, and of his bones;
Read in context
- 28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
- 29ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
- 30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
- 31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
- 32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
Cross references
- 1 Corinthians 6:15 1 ಕೊರಿಂಥದವರಿಗೆ 6:15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
- 1 Corinthians 12:12–27 1 ಕೊರಿಂಥದವರಿಗೆ 12:12–27ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ. ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ? ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ. ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ. ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
- Romans 12:5 ರೋಮಾಪುರದವರಿಗೆ 12:5ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
- Genesis 2:23 ಆದಿಕಾಂಡ 2:23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- Ephesians 1:23 ಎಫೆಸದವರಿಗೆ 1:23ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Colossians 2:19 ಕೊಲೊಸ್ಸೆಯವರಿಗೆ 2:19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.