Ephesians · chapter 5 · verse 8
Ephesians 5:8 in Kannada
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
Neevu hindina kaaladalli kattaleyaagiddiri, aadare eega neevu kartanalli belakaagiruvadarinda belakina makkalante nadedukolliri.
Ephesians 5:8 in English
- King James Version (KJV)
- For ye were sometimes darkness, but now [are ye] light in the Lord: walk as children of light:
- World English Bible (WEB)
- For you were once darkness, but are now light in the Lord. Walk as children of light,
- American Standard Version (ASV)
- for ye were once darkness, but are now light in the Lord: walk as children of light
- Bible in Basic English (BBE)
- For you at one time were dark, but now are light in the Lord: let your behaviour be that of children of light
- Darby Translation (DBY)
- for ye were once darkness, but now light in [the] Lord; walk as children of light,
- Webster's Bible (WBS)
- For ye were sometime darkness, but now [are ye] light in the Lord: walk as children of light;
- Young's Literal Translation (YLT)
- for ye were once darkness, and now light in the Lord; as children of light walk ye,
Read in context
- 6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 7ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
- 8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- 10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
Cross references
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- 1 Peter 2:9–11 1 ಪೇತ್ರನು 2:9–11ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ. ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Isaiah 42:6–7 ಯೆಶಾಯ 42:6–7ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- John 12:36 ಯೋಹಾನನು 12:36ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
- Isaiah 9:2 ಯೆಶಾಯ 9:2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
- Ephesians 2:2 ಎಫೆಸದವರಿಗೆ 2:2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.