Ephesians · chapter 6 · verse 17
Ephesians 6:17 in Kannada
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
Idallade rakshaneyemba shirastraana vannu ittukondu aatmanu koduva devara vaakyavemba kattiyannu hidiyiri.
Ephesians 6:17 in English
- King James Version (KJV)
- And take the helmet of salvation, and the sword of the Spirit, which is the word of God:
- World English Bible (WEB)
- And take the helmet of salvation, and the sword of the Spirit, which is the word of God;
- American Standard Version (ASV)
- And take the helmet of salvation, and the sword of the Spirit, which is the word of God:
- Bible in Basic English (BBE)
- And take salvation for your head-dress and the sword of the Spirit, which is the word of God:
- Darby Translation (DBY)
- Have also the helmet of salvation, and the sword of the Spirit, which is God's word;
- Webster's Bible (WBS)
- And take the helmet of salvation, and the sword of the Spirit, which is the word of God:
- Young's Literal Translation (YLT)
- and the helmet of the salvation receive, and the sword of the Spirit, which is the saying of God,
Read in context
- 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
- 17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
- 18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- 19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
Cross references
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Isaiah 49:2 ಯೆಶಾಯ 49:2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Revelation 2:16 ಪ್ರಕಟನೆ 2:16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
- Matthew 4:10–11 ಮತ್ತಾಯನು 4:10–11ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು. ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- Hosea 6:5 ಹೋಶೇಯ 6:5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Matthew 4:4 ಮತ್ತಾಯನು 4:4ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Matthew 4:7 ಮತ್ತಾಯನು 4:7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.