Esther · chapter 8 · verse 16
Esther 8:16 in Kannada
ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
Yehoodyarige belakoo santoshavoo aanandavoo ghanavoo untaa giddavu.prati praantyadalliyoo prati pattana dalliyoo arasana maatoo avana aajnyeyoo ellige banto alli yehoodyarige santoshavoo aanandavoo habbavoo sudinavoo untaagiddavu. Idallade aa deshada aneka janaru yehoodya raadaru. Yaakandare yehoodyara bhayavu avara mele ittu.
Esther 8:16 in English
- King James Version (KJV)
- The Jews had light, and gladness, and joy, and honour.
- World English Bible (WEB)
- The Jews had light, gladness, joy, and honor.
- American Standard Version (ASV)
- The Jews had light and gladness, and joy and honor.
- Bible in Basic English (BBE)
- And the Jews had light and joy and honour.
- Darby Translation (DBY)
- The Jews had light, and joy, and gladness, and honour.
- Webster's Bible (WBS)
- The Jews had light, and gladness, and joy, and honor.
- Young's Literal Translation (YLT)
- to the Jews hath been light, and gladness, and joy, and honour,
Read in context
- 14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
- 15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- 16ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- 17ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
Cross references
- Proverbs 11:10 ಜ್ಞಾನೋಕ್ತಿಗಳು 11:10ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Psalm 18:28 ಕೀರ್ತನೆಗಳು 18:28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
- Esther 4:1–3 ಎಸ್ತೇರಳು 4:1–3ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು. ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
- Psalm 30:5–11 ಕೀರ್ತನೆಗಳು 30:5–11ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು. ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು. ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು. ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು. ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ? ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Esther 9:17 ಎಸ್ತೇರಳು 9:17ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Psalm 112:4 ಕೀರ್ತನೆಗಳು 112:4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Isaiah 30:29–30 ಯೆಶಾಯ 30:29–30ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು. ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Proverbs 4:18–19 ಜ್ಞಾನೋಕ್ತಿಗಳು 4:18–19ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು. ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.