Esther · chapter 9 · verse 22
Esther 9:22 in Kannada
ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
Enandare, aa divasagalalli yehoodyaru tamma shatrugalinda tappisikondu vishraanti hondidaru. Aa tingalu duhkhadinda santoshakkoo golaaduvikeyinda sudinakkoo avarige badalaayitu. Aadadarinda avaru aa divasagalannu habbada divasagalaagiyoo santoshada divasagalaagiyoo obbarigobbaru bhaagagalannu kaluhisuva divasagalaagiyoo badava rige daanagalannu koduva divasagalaagiyoo maadabeku embadu.
Esther 9:22 in English
- King James Version (KJV)
- As the days wherein the Jews rested from their enemies, and the month which was turned unto them from sorrow to joy, and from mourning into a good day: that they should make them days of feasting and joy, and of sending portions one to another, and gifts to the poor.
- World English Bible (WEB)
- as the days in which the Jews had rest from their enemies, and the month which was turned to them from sorrow to gladness, and from mourning into a holiday; that they should make them days of feasting and gladness, and of sending presents of food to one another, and gifts to the needy.
- American Standard Version (ASV)
- as the days wherein the Jews had rest from their enemies, and the month which was turned unto them from sorrow to gladness, and from mourning into a good day; that they should make them days of feasting and gladness, and of sending portions one to another, and gifts to the poor.
- Bible in Basic English (BBE)
- As days on which the Jews had rest from their haters, and the month which for them was turned from sorrow to joy, and from weeping to a good day: and that they were to keep them as days of feasting and joy, of sending offerings to one another and good things to the poor.
- Darby Translation (DBY)
- as the days on which the Jews rested from their enemies, and the month that was turned to them from sorrow to joy, and from mourning into a good day; that they should make them days of feasting and joy, and of sending portions one to another, and gifts to the poor.
- Webster's Bible (WBS)
- As the days in which the Jews rested from their enemies, and the month which was turned to them from sorrow to joy, and from mourning into a good day, that they should make them days of feasting and joy, and of sending portions one to another, and gifts to the poor.
- Young's Literal Translation (YLT)
- as days on which the Jews have rested from their enemies, and the month that hath been turned to them from sorrow to joy, and from mourning to a good day, to make them days of banquet and of joy, and of sending portions one to another, and gifts to the needy.
Read in context
- 20ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
- 21ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
- 22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
- 23ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
- 24ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
Cross references
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Isaiah 12:1–2 ಯೆಶಾಯ 12:1–2ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Isaiah 14:3 ಯೆಶಾಯ 14:3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
- Esther 9:19 ಎಸ್ತೇರಳು 9:19ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
- Galatians 2:10 ಗಲಾತ್ಯದವರಿಗೆ 2:10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
- Esther 3:12–13 ಎಸ್ತೇರಳು 3:12–13ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Matthew 5:4 ಮತ್ತಾಯನು 5:4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Nehemiah 8:10–12 ನೆಹೆಮೀಯ 8:10–12ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ. ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು. ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
- Acts 2:44–46 ಅಪೊಸ್ತಲರ ಕೃತ್ಯಗಳು 2:44–46ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು. ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Psalm 103:2 ಕೀರ್ತನೆಗಳು 103:2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Exodus 13:3–8 ವಿಮೋಚನಕಾಂಡ 13:3–8ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು. ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ. ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು. ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
Original words (Hebrew)
- days · H3117יוֹם yôwm
- Jews · H3064יְהוּדִי Yᵉhûwdîy
- rested · H5117נוּחַ nûwach
- enemies · H341אֹיֵב ʼôyêb
- month · H2320חֹדֶשׁ chôdesh
- turned · H2015הָפַךְ hâphak
- sorrow · H3015יָגוֹן yâgôwn
- joy · H8057שִׂמְחָה simchâh
- mourning · H60אֵבֶל ʼêbel
- good · H2896טוֹב ṭôwb
- day · H3117יוֹם yôwm
- make · H6213עָשָׂה ʻâsâh
- days · H3117יוֹם yôwm
- feasting · H4960מִשְׁתֶּה mishteh
- joy · H8057שִׂמְחָה simchâh
- sending · H4916מִשְׁלוֹחַ mishlôwach
- portions · H4490מָנָה mânâh
- one · H376אִישׁ ʼîysh
- another · H7453רֵעַ rêaʻ
- gifts · H4979מַתָּנָה mattânâh
- poor · H34אֶבְיוֹן ʼebyôwn