Exodus · chapter 10 · verse 1
Exodus 10:1 in Kannada
ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
Taruvaaya kartanu moshege-- pharohana balige hogu. Naanu nanna soochakakaaryagalannu avana munde torisu vadakkaagi avana hrudayavannoo avana sevakara hrudayagalannoo kathinamaadiddene.
Exodus 10:1 in English
- King James Version (KJV)
- And the LORD said unto Moses, Go in unto Pharaoh: for I have hardened his heart, and the heart of his servants, that I might shew these my signs before him:
- World English Bible (WEB)
- The LORD said to Moses, “Go in to Pharaoh, for I have hardened his heart and the heart of his servants, that I may show these my signs among them;
- American Standard Version (ASV)
- And Jehovah said unto Moses, Go in unto Pharaoh: for I have hardened his heart, and the heart of his servants, that I may show these my signs in the midst of them,
- Bible in Basic English (BBE)
- And the Lord said to Moses, Go in to Pharaoh: for I have made his heart and the hearts of his servants hard, so that I may let my signs be seen among them:
- Darby Translation (DBY)
- And Jehovah said to Moses, Go in unto Pharaoh; for I have hardened his heart, and the heart of his bondmen, that I might do these my signs in their midst,
- Webster's Bible (WBS)
- And the LORD said to Moses, Go in to Pharaoh: for I have hardened his heart, and the heart of his servants; that I might show these my signs before him:
- Young's Literal Translation (YLT)
- And Jehovah saith unto Moses, 'Go in unto Pharaoh, for I have declared hard his heart, and the heart of his servants, so that I set these My signs in their midst,
Read in context
- 1ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
- 2ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
- 3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
Cross references
- Exodus 4:21 ವಿಮೋಚನಕಾಂಡ 4:21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- Exodus 3:20 ವಿಮೋಚನಕಾಂಡ 3:20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Romans 9:17 ರೋಮಾಪುರದವರಿಗೆ 9:17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
- Exodus 7:13–14 ವಿಮೋಚನಕಾಂಡ 7:13–14ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Exodus 15:14–15 ವಿಮೋಚನಕಾಂಡ 15:14–15ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- Exodus 14:17–18 ವಿಮೋಚನಕಾಂಡ 14:17–18ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು. ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
- Exodus 7:4 ವಿಮೋಚನಕಾಂಡ 7:4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
- Exodus 9:16 ವಿಮೋಚನಕಾಂಡ 9:16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- Psalm 7:11 ಕೀರ್ತನೆಗಳು 7:11ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
- Joshua 2:9–10 ಯೆಹೋಶುವ 2:9–10ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
- Joshua 4:23–24 ಯೆಹೋಶುವ 4:23–24ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು. ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
- Exodus 9:27 ವಿಮೋಚನಕಾಂಡ 9:27ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.