Exodus · chapter 10 · verse 23
Exodus 10:23 in Kannada
ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
Mooru dinagala varege avaru obbarannobbaru nodalilla, yaaroo tamma sthala vannu bittu elaloo illa. Aadare israayel makkaligellaa avaru vaasisuva sthaladalli avarige belakittu.
Exodus 10:23 in English
- King James Version (KJV)
- They saw not one another, neither rose any from his place for three days: but all the children of Israel had light in their dwellings.
- World English Bible (WEB)
- They didn’t see one another, and nobody rose from his place for three days; but all the children of Israel had light in their dwellings.
- American Standard Version (ASV)
- they saw not one another, neither rose any one from his place for three days: but all the children of Israel had light in their dwellings.
- Bible in Basic English (BBE)
- They were not able to see one another, and no one got up from his place for three days: but where the children of Israel were living it was light.
- Darby Translation (DBY)
- they saw not one another, neither rose any from his place, for three days. But all the children of Israel had light in their dwellings.
- Webster's Bible (WBS)
- They saw not one another, neither rose any from his place for three days: but all the children of Israel had light in their dwellings.
- Young's Literal Translation (YLT)
- they have not seen one another, and none hath risen from his place three days; and to all the sons of Israel there hath been light in their dwellings.'
Read in context
- 21ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
- 22ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.
- 23ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- 24ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
- 25ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು.
Cross references
- Exodus 8:22 ವಿಮೋಚನಕಾಂಡ 8:22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Exodus 9:4 ವಿಮೋಚನಕಾಂಡ 9:4ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Isaiah 65:13–14 ಯೆಶಾಯ 65:13–14ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- Isaiah 60:1–3 ಯೆಶಾಯ 60:1–3ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- Exodus 9:26 ವಿಮೋಚನಕಾಂಡ 9:26ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Exodus 14:20 ವಿಮೋಚನಕಾಂಡ 14:20ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Joshua 24:7 ಯೆಹೋಶುವ 24:7ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.