Exodus · chapter 12 · verse 10
Exodus 12:10 in Kannada
ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Adaralli belagina varege enannoo ulisabaaradu. Belagina varege adaralli ulidaddannu benkiyinda suttubidabeku.
Exodus 12:10 in English
- King James Version (KJV)
- And ye shall let nothing of it remain until the morning; and that which remaineth of it until the morning ye shall burn with fire.
- World English Bible (WEB)
- You shall let nothing of it remain until the morning; but that which remains of it until the morning you shall burn with fire.
- American Standard Version (ASV)
- And ye shall let nothing of it remain until the morning; but that which remaineth of it until the morning ye shall burn with fire.
- Bible in Basic English (BBE)
- Do not keep any of it till the morning; anything which is not used is to be burned with fire.
- Darby Translation (DBY)
- And ye shall let none of it remain until the morning; and what remaineth of it until the morning ye shall burn with fire.
- Webster's Bible (WBS)
- And ye shall let nothing of it remain till the morning: and that which remaineth of it till the morning ye shall burn with fire.
- Young's Literal Translation (YLT)
- and ye do not leave of it till morning, and that which is remaining of it till morning with fire ye do burn.
Read in context
- 8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
- 9ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
- 10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- 11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
- 12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
Cross references
- Exodus 23:18 ವಿಮೋಚನಕಾಂಡ 23:18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
- Exodus 34:25 ವಿಮೋಚನಕಾಂಡ 34:25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
- Exodus 29:34 ವಿಮೋಚನಕಾಂಡ 29:34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
- Leviticus 22:30 ಯಾಜಕಕಾಂಡ 22:30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
- Deuteronomy 16:4–5 ಧರ್ಮೋಪದೇಶಕಾಂಡ 16:4–5ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
- Leviticus 7:15–17 ಯಾಜಕಕಾಂಡ 7:15–17ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.