Exodus · chapter 12 · verse 8
Exodus 12:8 in Kannada
ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
Aa raatriyalliye aa maansavannu tinnabeku. Benkiyalli suttu adannoo huliyillada rottiga lannoo kahiyaada palyagala sangada tinnabeku.
Exodus 12:8 in English
- King James Version (KJV)
- And they shall eat the flesh in that night, roast with fire, and unleavened bread; [and] with bitter [herbs] they shall eat it.
- World English Bible (WEB)
- They shall eat the meat in that night, roasted with fire, with unleavened bread. They shall eat it with bitter herbs.
- American Standard Version (ASV)
- And they shall eat the flesh in that night, roast with fire, and unleavened bread; with bitter herbs they shall eat it.
- Bible in Basic English (BBE)
- And let your food that night be the flesh of the lamb, cooked with fire in the oven, together with unleavened bread and bitter-tasting plants.
- Darby Translation (DBY)
- And they shall eat the flesh in that night, roast with fire, and unleavened bread; with bitter [herbs] shall they eat it.
- Webster's Bible (WBS)
- And they shall eat the flesh in that night, roasted with fire; and unleavened bread, [and] with bitter [herbs] they shall eat it.
- Young's Literal Translation (YLT)
- 'And they have eaten the flesh in this night, roast with fire; with unleavened things and bitters they do eat it;
Read in context
- 6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
- 7ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
- 8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
- 9ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
- 10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Cross references
- Exodus 34:25 ವಿಮೋಚನಕಾಂಡ 34:25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
- Deuteronomy 16:7 ಧರ್ಮೋಪದೇಶಕಾಂಡ 16:7ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
- Deuteronomy 16:3–4 ಧರ್ಮೋಪದೇಶಕಾಂಡ 16:3–4ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Numbers 9:11–12 ಅರಣ್ಯಕಾಂಡ 9:11–12ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು. ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- Exodus 23:18 ವಿಮೋಚನಕಾಂಡ 23:18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
- Exodus 1:14 ವಿಮೋಚನಕಾಂಡ 1:14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- John 6:52–57 ಯೋಹಾನನು 6:52–57ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
- Exodus 13:7 ವಿಮೋಚನಕಾಂಡ 13:7ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- 1 Corinthians 5:6–8 1 ಕೊರಿಂಥದವರಿಗೆ 5:6–8ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ? ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.