Exodus · chapter 13 · verse 21
Exodus 13:21 in Kannada
ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
Idallade avaru hagalirulu prayaana maaduva haage kartanu hagalalli avarige daari torisuvadakke meghastambhadalliyoo raatriyalli avarige belaku koduvadakke agnistambhadalliyoo avara munde hodanu.aatanu hagalalli meghastambhavannoo raatriyalli agnistambhavannoo janara edurininda tegedu bidalilla.
Exodus 13:21 in English
- King James Version (KJV)
- And the LORD went before them by day in a pillar of a cloud, to lead them the way; and by night in a pillar of fire, to give them light; to go by day and night:
- World English Bible (WEB)
- The LORD went before them by day in a pillar of cloud, to lead them on their way, and by night in a pillar of fire, to give them light, that they might go by day and by night:
- American Standard Version (ASV)
- And Jehovah went before them by day in a pillar of cloud, to lead them the way, and by night in a pillar of fire, to give them light; that they might go by day and by night:
- Bible in Basic English (BBE)
- And the Lord went before them by day in a pillar of cloud, guiding them on their way; and by night in a pillar of fire to give them light: so that they were able to go on day and night:
- Darby Translation (DBY)
- And Jehovah went before their face by day in a pillar of a cloud, to lead them [in] the way; and by night in a pillar of fire, to give them light; so that they could go day and night.
- Webster's Bible (WBS)
- And the LORD went before them by day in a pillar of a cloud, to lead them in the way; and by night in a pillar of fire, to give them light: to go by day and night.
- Young's Literal Translation (YLT)
- and Jehovah is going before them by day in a pillar of a cloud, to lead them in the way, and by night in a pillar of fire, to give light to them, to go by day and by night;
Read in context
- 19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
- 20ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
- 21ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- 22ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
Cross references
- 1 Corinthians 10:1–2 1 ಕೊರಿಂಥದವರಿಗೆ 10:1–2ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು; ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Psalm 99:7 ಕೀರ್ತನೆಗಳು 99:7ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
- Deuteronomy 1:33 ಧರ್ಮೋಪದೇಶಕಾಂಡ 1:33ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
- Psalm 105:39 ಕೀರ್ತನೆಗಳು 105:39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
- Nehemiah 9:19 ನೆಹೆಮೀಯ 9:19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
- Exodus 33:9–10 ವಿಮೋಚನಕಾಂಡ 33:9–10ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು. ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.
- Numbers 14:14 ಅರಣ್ಯಕಾಂಡ 14:14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
- Psalm 78:14 ಕೀರ್ತನೆಗಳು 78:14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- Numbers 9:15–23 ಅರಣ್ಯಕಾಂಡ 9:15–23ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು. ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು. ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು. ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು. ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು. ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು. ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
- Numbers 10:34 ಅರಣ್ಯಕಾಂಡ 10:34ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
- Exodus 40:34–38 ವಿಮೋಚನಕಾಂಡ 40:34–38ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು. ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
Original words (Hebrew)
- went · H1980הָלַךְ hâlak
- before · H6440פָּנִים pânîym
- day · H3119יוֹמָם yôwmâm
- pillar · H5982עַמּוּד ʻammûwd
- cloud · H6051עָנָן ʻânân
- lead · H5148נָחָה nâchâh
- way · H1870דֶּרֶךְ derek
- night · H3915לַיִל layil
- pillar · H5982עַמּוּד ʻammûwd
- fire · H784אֵשׁ ʼêsh
- light · H215אוֹר ʼôwr
- go · H3212יָלַךְ yâlak
- day · H3119יוֹמָם yôwmâm
- night · H3915לַיִל layil