Exodus · chapter 14 · verse 16
Exodus 14:16 in Kannada
ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
Neenu ninna kolannu etti samudrada mele kaichaachi adannu vibhaagisu. Aaga israayel makkalu samudrada madhyadalli onagida nelada mele hoguvaru.
Exodus 14:16 in English
- King James Version (KJV)
- But lift thou up thy rod, and stretch out thine hand over the sea, and divide it: and the children of Israel shall go on dry [ground] through the midst of the sea.
- World English Bible (WEB)
- Lift up your rod, and stretch out your hand over the sea and divide it. Then the children of Israel shall go into the middle of the sea on dry ground.
- American Standard Version (ASV)
- And lift thou up thy rod, and stretch out thy hand over the sea, and divide it: and the children of Israel shall go into the midst of the sea on dry ground.
- Bible in Basic English (BBE)
- And let your rod be lifted up and your hand stretched out over the sea, and it will be parted in two; and the children of Israel will go through on dry land.
- Darby Translation (DBY)
- And thou, lift thy staff, and stretch out thy hand over the sea, and divide it; and the children of Israel shall go on dry [ground] through the midst of the sea.
- Webster's Bible (WBS)
- But lift thou thy rod, and stretch out thy hand over the sea, and divide it; and the children of Israel shall go on dry [ground] through the midst of the sea.
- Young's Literal Translation (YLT)
- and thou, lift up thy rod, and stretch out thy hand towards the sea, and cleave it, and the sons of Israel go into the midst of the sea on dry land.
Read in context
- 14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- 15ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
- 16ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
- 17ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
- 18ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
Cross references
- Exodus 7:19 ವಿಮೋಚನಕಾಂಡ 7:19ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.
- Exodus 4:20 ವಿಮೋಚನಕಾಂಡ 4:20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Exodus 4:2 ವಿಮೋಚನಕಾಂಡ 4:2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- Isaiah 10:26 ಯೆಶಾಯ 10:26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
- Exodus 7:9 ವಿಮೋಚನಕಾಂಡ 7:9ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
- Exodus 14:26 ವಿಮೋಚನಕಾಂಡ 14:26ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
- Numbers 20:8–9 ಅರಣ್ಯಕಾಂಡ 20:8–9ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು. ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
- Numbers 20:11 ಅರಣ್ಯಕಾಂಡ 20:11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Exodus 14:21–22 ವಿಮೋಚನಕಾಂಡ 14:21–22ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.