Exodus · chapter 14 · verse 27
Exodus 14:27 in Kannada
ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
Aaga mosheyu samudrada mele kaichaachalaagi samudravu belagaaguvaagale tanna shaktige tirugikonditu. Aiguptyaru adakkeduraagi odihodaru. Kartanu aiguptyarannu samudrada madhyadalli sanharisidanu.
Exodus 14:27 in English
- King James Version (KJV)
- And Moses stretched forth his hand over the sea, and the sea returned to his strength when the morning appeared; and the Egyptians fled against it; and the LORD overthrew the Egyptians in the midst of the sea.
- World English Bible (WEB)
- Moses stretched out his hand over the sea, and the sea returned to its strength when the morning appeared; and the Egyptians fled against it. The LORD overthrew the Egyptians in the middle of the sea.
- American Standard Version (ASV)
- And Moses stretched forth his hand over the sea, and the sea returned to its strength when the morning appeared; and the Egyptians fled against it; and Jehovah overthrew the Egyptians in the midst of the sea.
- Bible in Basic English (BBE)
- And when Moses' hand was stretched out over the sea, at dawn the sea came flowing back, meeting the Egyptians in their flight, and the Lord sent destruction on the Egyptians in the middle of the sea.
- Darby Translation (DBY)
- And Moses stretched out his hand over the sea, and the sea returned to its strength toward the morning; and the Egyptians fled against it; and Jehovah overturned the Egyptians into the midst of the sea.
- Webster's Bible (WBS)
- And Moses stretched forth his hand over the sea, and the sea returned to its strength when the morning appeared; and the Egyptians fled against it; and the LORD overthrew the Egyptians in the midst of the sea.
- Young's Literal Translation (YLT)
- And Moses stretcheth out his hand towards the sea, and the sea turneth back, at the turning of the morning, to its perennial flow, and the Egyptians are fleeing at its coming, and Jehovah shaketh off the Egyptians in the midst of the sea,
Read in context
- 25ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
- 26ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
- 27ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
- 28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- 29ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
Cross references
- Joshua 4:18 ಯೆಹೋಶುವ 4:18ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
- Psalm 78:53 ಕೀರ್ತನೆಗಳು 78:53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- Hebrews 11:29 ಇಬ್ರಿಯರಿಗೆ 11:29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
- Deuteronomy 11:4 ಧರ್ಮೋಪದೇಶಕಾಂಡ 11:4ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ
- Exodus 14:21–22 ವಿಮೋಚನಕಾಂಡ 14:21–22ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Judges 5:20–21 ನ್ಯಾಯಸ್ಥಾಪಕರು 5:20–21ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು. ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
- Exodus 15:1–21 ವಿಮೋಚನಕಾಂಡ 15:1–21ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ. ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ. ಕರ್ತನು ಯುಗಯುಗಾಂತರಗಳ ವರೆಗೆ ಆಳುವನು. ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು. ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು. ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
Original words (Hebrew)
- Moses · H4872מֹשֶׁה Môsheh
- forth · H5186נָטָה nâṭâh
- hand · H3027יָד yâd
- sea · H3220יָם yâm
- sea · H3220יָם yâm
- returned · H7725שׁוּב shûwb
- strength · H386אֵיתָן ʼêythân
- morning · H1242בֹּקֶר bôqer
- appeared · H6437פָּנָה pânâh
- Egyptians · H4714מִצְרַיִם Mitsrayim
- fled · H5127נוּס nûwç
- against · H7125קִרְאָה qirʼâh
- overthrew · H5287נָעַר nâʻar
- Egyptians · H4714מִצְרַיִם Mitsrayim
- midst · H8432תָּוֶךְ tâvek
- sea · H3220יָם yâm