Exodus · chapter 14 · verse 4
Exodus 14:4 in Kannada
ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
Idallade pharohanu avarannu hindattuvante naanu avana hrudayavannu kathina maaduvenu; pharohanalliyoo avana ellaa sainyadalliyoo nannannu ghanapadisikolluvenu; aaga naane kartanendu aiguptyaru tiliyuvaru endu helidanu. Avaru haageye maadidaru.
Exodus 14:4 in English
- King James Version (KJV)
- And I will harden Pharaoh’s heart, that he shall follow after them; and I will be honoured upon Pharaoh, and upon all his host; that the Egyptians may know that I [am] the LORD. And they did so.
- World English Bible (WEB)
- I will harden Pharaoh’s heart, and he will follow after them; and I will get honor over Pharaoh, and over all his armies; and the Egyptians shall know that I am the LORD.” They did so.
- American Standard Version (ASV)
- And I will harden Pharaoh’s heart, and he shall follow after them; and I will get me honor upon Pharaoh, and upon all his host: and the Egyptians shall know that I am Jehovah. And they did so.
- Bible in Basic English (BBE)
- And I will make Pharaoh's heart hard, and he will come after them and I will be honoured over Pharaoh and all his army, so that the Egyptians may see that I am the Lord. And they did so.
- Darby Translation (DBY)
- And I will harden Pharaoh's heart, that he may pursue after them; and I will glorify myself in Pharaoh, and in all his host; and the Egyptians shall know that I am Jehovah. And they did so.
- Webster's Bible (WBS)
- And I will harden Pharaoh's heart, that he shall follow them; and I will be honored upon Pharaoh, and upon all his host; that the Egyptians may know that I [am] the LORD. And they did so.
- Young's Literal Translation (YLT)
- and I have strengthened the heart of Pharaoh, and he hath pursued after them, and I am honoured on Pharaoh, and on all his force, and the Egyptians have known that I [am] Jehovah;' and they do so.
Read in context
- 2ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
- 3ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
- 4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- 5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
- 6ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
Cross references
- Romans 9:22–23 ರೋಮಾಪುರದವರಿಗೆ 9:22–23ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Exodus 7:5 ವಿಮೋಚನಕಾಂಡ 7:5ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
- Romans 9:17 ರೋಮಾಪುರದವರಿಗೆ 9:17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
- Exodus 7:3 ವಿಮೋಚನಕಾಂಡ 7:3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
- Exodus 9:16 ವಿಮೋಚನಕಾಂಡ 9:16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- Exodus 7:17 ವಿಮೋಚನಕಾಂಡ 7:17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
- Exodus 4:21–31 ವಿಮೋಚನಕಾಂಡ 4:21–31ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ. ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು. (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು. ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು. ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು. ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು. ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು. ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು. ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು. ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು. ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Ezekiel 28:22 ಯೆಹೆಜ್ಕೇಲನು 28:22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
- Isaiah 2:11–12 ಯೆಶಾಯ 2:11–12ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- Ezekiel 39:13 ಯೆಹೆಜ್ಕೇಲನು 39:13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
- Nehemiah 9:10 ನೆಹೆಮೀಯ 9:10ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
- Daniel 4:30–37 ದಾನಿಯೇಲನು 4:30–37ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು. ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು. ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು. ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು. ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು. ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.