Exodus · chapter 15 · verse 11
Exodus 15:11 in Kannada
ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
Devarugalalli o kartane, ninna haage yaariddaare? Parishuddhatvadalli mahime hondidavanoo stotragalalli bhayankaranoo adbhutagalannu maaduvaatanoo aada ninna haage yaariddaare?
Exodus 15:11 in English
- King James Version (KJV)
- Who [is] like unto thee, O LORD, among the gods? who [is] like thee, glorious in holiness, fearful [in] praises, doing wonders?
- World English Bible (WEB)
- Who is like you, LORD, among the gods? Who is like you, glorious in holiness, fearful in praises, doing wonders?
- American Standard Version (ASV)
- Who is like unto thee, O Jehovah, among the gods? Who is like thee, glorious in holiness, Fearful in praises, doing wonders?
- Bible in Basic English (BBE)
- Who is like you, O Lord, among the gods? who is like you, in holy glory, to be praised with fear, doing wonders?
- Darby Translation (DBY)
- Who is like unto thee, Jehovah, among the gods? Who is like unto thee, glorifying thyself in holiness, Fearful [in] praises, doing wonders?
- Webster's Bible (WBS)
- Who [is] like to thee, O LORD, among the gods? who [is] like thee, glorious in holiness, fearful in praises, doing wonders!
- Young's Literal Translation (YLT)
- Who [is] like Thee among the gods, O Jehovah? Who [is] like Thee — honourable in holiness — Fearful in praises — doing wonders?
Read in context
- 9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- 10ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- 11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- 12ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.
- 13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
Cross references
- 1 Kings 8:23 1 ಅರಸುಗಳು 8:23ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
- Psalm 89:5–8 ಕೀರ್ತನೆಗಳು 89:5–8ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು. ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು? ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ. ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- 1 Samuel 2:2 1 ಸಮುವೇಲನು 2:2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- 2 Samuel 7:22 2 ಸಮುವೇಲನು 7:22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
- Revelation 4:8 ಪ್ರಕಟನೆ 4:8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- Jeremiah 10:6–7 ಯೆರೆಮೀಯ 10:6–7ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- Deuteronomy 3:24 ಧರ್ಮೋಪದೇಶಕಾಂಡ 3:24ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Psalm 77:14 ಕೀರ್ತನೆಗಳು 77:14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.