Exodus · chapter 15 · verse 4
Exodus 15:4 in Kannada
ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
Aatanu pharohana rathagalannoo avana sainyavannoo samudra dalli nookiddaane; aayalpatta avana adhipatigalu saha kempu samudradalli mulugihodaru.
Exodus 15:4 in English
- King James Version (KJV)
- Pharaoh’s chariots and his host hath he cast into the sea: his chosen captains also are drowned in the Red sea.
- World English Bible (WEB)
- He has cast Pharaoh’s chariots and his army into the sea. His chosen captains are sunk in the Red Sea.
- American Standard Version (ASV)
- Pharaoh’s chariots and his host hath he cast into the sea; And his chosen captains are sunk in the Red Sea.
- Bible in Basic English (BBE)
- Pharaoh's war-carriages and his army he has sent down into the sea: the best of his captains have gone down into the Red Sea.
- Darby Translation (DBY)
- Pharaoh's chariots and his army hath he cast into the sea; His chosen captains also are drowned in the Red Sea.
- Webster's Bible (WBS)
- Pharaoh's chariots and his host hath he cast into the sea: his chosen captains also are drowned in the Red sea.
- Young's Literal Translation (YLT)
- Chariots of Pharaoh and his force He hath cast into the sea; And the choice of his captains Have sunk in the Red Sea!
Read in context
- 2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- 3ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
- 4ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
- 5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
- 6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
Cross references
- Exodus 14:13–28 ವಿಮೋಚನಕಾಂಡ 14:13–28ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು. ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು. ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು. ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು. ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು. ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ. ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು. ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು. ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Exodus 14:6–7 ವಿಮೋಚನಕಾಂಡ 14:6–7ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು. ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.