Exodus · chapter 16 · verse 34
Exodus 16:34 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು.
Kartanu moshege aajnyaapisidanteye aaronanu adannu (manna vannu) kaapaaduvadakke saakshiyaagi ittanu.
Exodus 16:34 in English
- King James Version (KJV)
- As the LORD commanded Moses, so Aaron laid it up before the Testimony, to be kept.
- World English Bible (WEB)
- As the LORD commanded Moses, so Aaron laid it up before the Testimony, to be kept.
- American Standard Version (ASV)
- As Jehovah commanded Moses, so Aaron laid it up before the Testimony, to be kept.
- Bible in Basic English (BBE)
- So Aaron put it away in front of the holy chest to be kept, as the Lord gave orders to Moses.
- Darby Translation (DBY)
- As Jehovah had commanded Moses, so Aaron deposited it before the Testimony, to be kept.
- Webster's Bible (WBS)
- As the LORD commanded Moses, so Aaron laid it up before the Testimony, to be kept.
- Young's Literal Translation (YLT)
- as Jehovah hath given commandment unto Moses, so doth Aaron let it rest before the Testimony, for a charge.
Read in context
- 32ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು.
- 33ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.
- 34ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು.
- 35ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- 36ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
Cross references
- Exodus 25:21 ವಿಮೋಚನಕಾಂಡ 25:21ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
- Exodus 27:21 ವಿಮೋಚನಕಾಂಡ 27:21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- Exodus 25:16 ವಿಮೋಚನಕಾಂಡ 25:16ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
- Exodus 40:20 ವಿಮೋಚನಕಾಂಡ 40:20ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
- Numbers 17:10 ಅರಣ್ಯಕಾಂಡ 17:10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
- Exodus 30:36 ವಿಮೋಚನಕಾಂಡ 30:36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
- Exodus 31:18 ವಿಮೋಚನಕಾಂಡ 31:18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Exodus 30:6 ವಿಮೋಚನಕಾಂಡ 30:6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
- Deuteronomy 10:5 ಧರ್ಮೋಪದೇಶಕಾಂಡ 10:5ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 1:50 ಅರಣ್ಯಕಾಂಡ 1:50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
- Exodus 38:21 ವಿಮೋಚನಕಾಂಡ 38:21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.