Exodus · chapter 18 · verse 23
Exodus 18:23 in Kannada
ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
Ee kaaryavannu maaduvadakke devaru ninage appanekottare neenu idannu nirvahisalu shakta naaguvi. Ee janarellaroo tamma tamma sthalagalige samaadhaanadinda hoguvaru andanu.
Exodus 18:23 in English
- King James Version (KJV)
- If thou shalt do this thing, and God command thee [so], then thou shalt be able to endure, and all this people shall also go to their place in peace.
- World English Bible (WEB)
- If you will do this thing, and God commands you so, then you will be able to endure, and all these people also will go to their place in peace.”
- American Standard Version (ASV)
- If thou shalt do this thing, and God command thee so, then thou shalt be able to endure, and all this people also shall go to their place in peace.
- Bible in Basic English (BBE)
- If you do this, and God gives approval, then you will be able to go on without weariness, and all this people will go to their tents in peace.
- Darby Translation (DBY)
- If thou do this thing, and God command thee [so], thou wilt be able to endure, and all this people shall also go to their place in peace.
- Webster's Bible (WBS)
- If thou shalt do this thing, and God command thee [so], then thou shalt be able to endure, and all this people shall also go to their place in peace.
- Young's Literal Translation (YLT)
- If thou dost this thing, and God hath commanded thee, then thou hast been able to stand, and all this people also goeth in unto its place in peace.'
Read in context
- 21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- 22ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
- 23ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
- 24ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು.
- 25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
Cross references
- Exodus 18:18 ವಿಮೋಚನಕಾಂಡ 18:18ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
- 1 Samuel 8:6–7 1 ಸಮುವೇಲನು 8:6–7ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
- 1 Samuel 8:22 1 ಸಮುವೇಲನು 8:22ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
- Genesis 21:10–12 ಆದಿಕಾಂಡ 21:10–12ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು. ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು. ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- 2 Samuel 18:3 2 ಸಮುವೇಲನು 18:3ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
- Genesis 18:33 ಆದಿಕಾಂಡ 18:33ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.