Exodus · chapter 18 · verse 8
Exodus 18:8 in Kannada
ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
Israayelyarigoskara kartanu pharoha nigoo aiguptyarigoo maadiddellavannoo avarige odagida ellaa sankatavannoo kartanu tammannu hege tappisidanembadannoo mosheyu tanna maava nige tiliyapadisidanu.
Exodus 18:8 in English
- King James Version (KJV)
- And Moses told his father in law all that the LORD had done unto Pharaoh and to the Egyptians for Israel’s sake, [and] all the travail that had come upon them by the way, and [how] the LORD delivered them.
- World English Bible (WEB)
- Moses told his father-in-law all that the LORD had done to Pharaoh and to the Egyptians for Israel’s sake, all the hardships that had come on them on the way, and how the LORD delivered them.
- American Standard Version (ASV)
- And Moses told his father-in-law all that Jehovah had done unto Pharaoh and to the Egyptians for Israel’s sake, all the travail that had come upon them by the way, and how Jehovah delivered them.
- Bible in Basic English (BBE)
- And Moses gave his father-in-law an account of all the Lord had done to Pharaoh and to the Egyptians because of Israel, and of all the troubles which had come on them by the way, and how the Lord had given them salvation.
- Darby Translation (DBY)
- And Moses told his father-in-law all that Jehovah had done to Pharaoh and to the Egyptians for Israel's sake; all the trouble that had befallen them on the way, and [how] Jehovah had delivered them.
- Webster's Bible (WBS)
- And Moses told his father-in-law all that the LORD had done to Pharaoh, and to the Egyptians for Israel's sake, [and] all the travail that had come upon them by the way, and [how] the LORD delivered them.
- Young's Literal Translation (YLT)
- and Moses recounteth to his father-in-law all that Jehovah hath done to Pharaoh, and to the Egyptians, on account of Israel, all the travail which hath found them in the way, and Jehovah doth deliver them.
Read in context
- 6ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
- 7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- 8ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
- 9ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
- 10ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.
Cross references
- Psalm 78:42–43 ಕೀರ್ತನೆಗಳು 78:42–43ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
- Psalm 81:7 ಕೀರ್ತನೆಗಳು 81:7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- Psalm 106:10 ಕೀರ್ತನೆಗಳು 106:10ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
- Numbers 20:14 ಅರಣ್ಯಕಾಂಡ 20:14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
- Psalm 145:4–12 ಕೀರ್ತನೆಗಳು 145:4–12ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ. ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Psalm 107:2 ಕೀರ್ತನೆಗಳು 107:2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- Nehemiah 9:9–15 ನೆಹೆಮೀಯ 9:9–15ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ. ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ. ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ. ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ. ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ. ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Exodus 15:22–24 ವಿಮೋಚನಕಾಂಡ 15:22–24ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ. ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
- Psalm 71:17–20 ಕೀರ್ತನೆಗಳು 71:17–20ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ. ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ! ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
- Exodus 16:3 ವಿಮೋಚನಕಾಂಡ 16:3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
Original words (Hebrew)
- Moses · H4872מֹשֶׁה Môsheh
- told · H5608סָפַר çâphar
- law · H2859חָתַן châthan
- done · H6213עָשָׂה ʻâsâh
- Pharaoh · H6547פַּרְעֹה Parʻôh
- Egyptians · H4714מִצְרַיִם Mitsrayim
- Israel’s · H3478יִשְׂרָאֵל Yisrâʼêl
- sake · H182אוֹדוֹת ʼôwdôwth
- travail · H8513תְּלָאָה tᵉlâʼâh
- come · H4672מָצָא mâtsâʼ
- way · H1870דֶּרֶךְ derek
- delivered · H5337נָצַל nâtsal