Exodus · chapter 19 · verse 10
Exodus 19:10 in Kannada
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
Aaga kartanu moshege--janara balige hogi ee hottoo naaleyoo avarannu shuddhamaadu, avaru tamma vastragalannu tolakollali.
Exodus 19:10 in English
- King James Version (KJV)
- And the LORD said unto Moses, Go unto the people, and sanctify them to day and to morrow, and let them wash their clothes,
- World English Bible (WEB)
- The LORD said to Moses, “Go to the people, and sanctify them today and tomorrow, and let them wash their garments,
- American Standard Version (ASV)
- And Jehovah said unto Moses, Go unto the people, and sanctify them to-day and to-morrow, and let them wash their garments,
- Bible in Basic English (BBE)
- And the Lord said to Moses, Go to the people and make them holy today and tomorrow, and let their clothing be washed.
- Darby Translation (DBY)
- And Jehovah said to Moses, Go to the people, and hallow them to-day and to-morrow, and let them wash their clothes;
- Webster's Bible (WBS)
- And the LORD said to Moses, Go to the people, and sanctify them to-day and to-morrow, and let them wash their clothes,
- Young's Literal Translation (YLT)
- And Jehovah saith unto Moses, 'Go unto the people; and thou hast sanctified them to-day and to-morrow, and they have washed their garments,
Read in context
- 8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
- 9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
- 10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
- 11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
- 12ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
Cross references
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Leviticus 11:44–45 ಯಾಜಕಕಾಂಡ 11:44–45ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- Genesis 35:2 ಆದಿಕಾಂಡ 35:2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Leviticus 15:5 ಯಾಜಕಕಾಂಡ 15:5ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- Numbers 8:21 ಅರಣ್ಯಕಾಂಡ 8:21ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Joshua 3:5 ಯೆಹೋಶುವ 3:5ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
- Joshua 7:13 ಯೆಹೋಶುವ 7:13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- Zechariah 3:3–4 ಜೆಕರ್ಯ 3:3–4ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Numbers 8:7 ಅರಣ್ಯಕಾಂಡ 8:7ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
- 2 Chronicles 30:17–19 2 ಪೂರ್ವಕಾಲವೃತ್ತಾಂತ 30:17–19ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು. ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.