Exodus · chapter 20 · verse 23
Exodus 20:23 in Kannada
ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
Nanna horataagi belli bangaarada devarugalannoo neevu maadikollabaaradu.
Exodus 20:23 in English
- King James Version (KJV)
- Ye shall not make with me gods of silver, neither shall ye make unto you gods of gold.
- World English Bible (WEB)
- You shall most certainly not make gods of silver or gods of gold for yourselves to be alongside me.
- American Standard Version (ASV)
- Ye shall not make [other gods] with me; gods of silver, or gods of gold, ye shall not make unto you.
- Bible in Basic English (BBE)
- Gods of silver and gods of gold you are not to make for yourselves.
- Darby Translation (DBY)
- Ye shall not make beside me gods of silver, and ye shall not make to you gods of gold.
- Webster's Bible (WBS)
- Ye shall not make with me gods of silver, neither shall ye make to you gods of gold.
- Young's Literal Translation (YLT)
- ye do not make with Me gods of silver, even gods of gold ye do not make to yourselves.
Read in context
- 21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
- 22ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
- 23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- 24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- 25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
Cross references
- Ezekiel 20:39 ಯೆಹೆಜ್ಕೇಲನು 20:39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 2 Kings 17:33 2 ಅರಸುಗಳು 17:33ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- Exodus 20:3–5 ವಿಮೋಚನಕಾಂಡ 20:3–5ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Exodus 32:31 ವಿಮೋಚನಕಾಂಡ 32:31ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
- 1 Corinthians 10:21–22 1 ಕೊರಿಂಥದವರಿಗೆ 10:21–22ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ. ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- 1 John 5:20–21 1 ಯೋಹಾನನು 5:20–21ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್. ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Ezekiel 43:8 ಯೆಹೆಜ್ಕೇಲನು 43:8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
- 1 Samuel 5:4–5 1 ಸಮುವೇಲನು 5:4–5ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- 2 Corinthians 6:14–16 2 ಕೊರಿಂಥದವರಿಗೆ 6:14–16ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.