Exodus · chapter 20 · verse 3
Exodus 20:3 in Kannada
ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
Nanna munde ninage bere devarugalu irabaaradu.
Exodus 20:3 in English
- King James Version (KJV)
- Thou shalt have no other gods before me.
- World English Bible (WEB)
- “You shall have no other gods before me.
- American Standard Version (ASV)
- Thou shalt have no other gods before me.
- Bible in Basic English (BBE)
- You are to have no other gods but me.
- Darby Translation (DBY)
- Thou shalt have no other gods before me.
- Webster's Bible (WBS)
- Thou shalt have no other gods before me.
- Young's Literal Translation (YLT)
- 'Thou hast no other Gods before Me.
Read in context
- 1ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--
- 2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- 3ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
- 4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
- 5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
Cross references
- Deuteronomy 5:7 ಧರ್ಮೋಪದೇಶಕಾಂಡ 5:7ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Psalm 81:9 ಕೀರ್ತನೆಗಳು 81:9ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
- Isaiah 46:9 ಯೆಶಾಯ 46:9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- Deuteronomy 6:5 ಧರ್ಮೋಪದೇಶಕಾಂಡ 6:5ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
- Deuteronomy 6:14 ಧರ್ಮೋಪದೇಶಕಾಂಡ 6:14ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
- Jeremiah 25:6 ಯೆರೆಮೀಯ 25:6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
- Joshua 24:18–24 ಯೆಹೋಶುವ 24:18–24ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು. ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು. ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- 1 John 5:20–21 1 ಯೋಹಾನನು 5:20–21ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್. ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.