Exodus · chapter 20 · verse 8
Exodus 20:8 in Kannada
ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
Sabbat dinavannu parishuddhavaagi iruvante jnyaapakadallittuko.
Exodus 20:8 in English
- King James Version (KJV)
- Remember the sabbath day, to keep it holy.
- World English Bible (WEB)
- “Remember the Sabbath day, to keep it holy.
- American Standard Version (ASV)
- Remember the sabbath day, to keep it holy.
- Bible in Basic English (BBE)
- Keep in memory the Sabbath and let it be a holy day.
- Darby Translation (DBY)
- Remember the sabbath day to hallow it.
- Webster's Bible (WBS)
- Remember the sabbath-day to keep it holy.
- Young's Literal Translation (YLT)
- 'Remember the Sabbath-day to sanctify it;
Read in context
- 6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- 7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- 8ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
- 9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
- 10ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
Cross references
- Leviticus 26:2 ಯಾಜಕಕಾಂಡ 26:2ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
- Leviticus 19:3 ಯಾಜಕಕಾಂಡ 19:3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 31:13–16 ವಿಮೋಚನಕಾಂಡ 31:13–16ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ. ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
- Genesis 2:3 ಆದಿಕಾಂಡ 2:3ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Leviticus 23:3 ಯಾಜಕಕಾಂಡ 23:3ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
- Exodus 23:12 ವಿಮೋಚನಕಾಂಡ 23:12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
- Leviticus 19:30 ಯಾಜಕಕಾಂಡ 19:30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
- Exodus 16:23–30 ವಿಮೋಚನಕಾಂಡ 16:23–30ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು. ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ. ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ಈ ದಿನವು ಕರ್ತನ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ. ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು. ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ. ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು. ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು. ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.
- Isaiah 56:4–6 ಯೆಶಾಯ 56:4–6ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ