Exodus · chapter 21 · verse 1
Exodus 21:1 in Kannada
ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
Eega avara munde neenu idatakkanyaayavidhigalu ive.
Exodus 21:1 in English
- King James Version (KJV)
- Now these [are] the judgments which thou shalt set before them.
- World English Bible (WEB)
- “Now these are the ordinances which you shall set before them:
- American Standard Version (ASV)
- Now these are the ordinances which thou shalt set before them.
- Bible in Basic English (BBE)
- Now these are the laws which you are to put before them.
- Darby Translation (DBY)
- And these are the judgments which thou shalt set before them.
- Webster's Bible (WBS)
- Now these [are] the judgments which thou shalt set before them.
- Young's Literal Translation (YLT)
- 'And these [are] the judgments which thou dost set before them:
Read in context
- 1ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
- 2ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
- 3ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
Cross references
- Deuteronomy 4:14 ಧರ್ಮೋಪದೇಶಕಾಂಡ 4:14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
- Deuteronomy 6:20 ಧರ್ಮೋಪದೇಶಕಾಂಡ 6:20ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--
- Exodus 24:3–4 ವಿಮೋಚನಕಾಂಡ 24:3–4ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- 1 Kings 6:12 1 ಅರಸುಗಳು 6:12ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
- Ezekiel 20:11 ಯೆಹೆಜ್ಕೇಲನು 20:11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
- Leviticus 18:26 ಯಾಜಕಕಾಂಡ 18:26ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
- 2 Chronicles 19:10 2 ಪೂರ್ವಕಾಲವೃತ್ತಾಂತ 19:10ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- Numbers 35:24 ಅರಣ್ಯಕಾಂಡ 35:24ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
- Deuteronomy 4:8 ಧರ್ಮೋಪದೇಶಕಾಂಡ 4:8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Ezekiel 20:25 ಯೆಹೆಜ್ಕೇಲನು 20:25ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Nehemiah 10:29 ನೆಹೆಮೀಯ 10:29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;