Exodus · chapter 21 · verse 13
Exodus 21:13 in Kannada
ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
Aadare avanu honchi nodade iddu devaru avana kaige avanannu oppisiddaagiddare avanu odihoguvante avanige ondu sthalavannu ninage naanu nemisuvenu.
Exodus 21:13 in English
- King James Version (KJV)
- And if a man lie not in wait, but God deliver [him] into his hand; then I will appoint thee a place whither he shall flee.
- World English Bible (WEB)
- but not if it is unintentional, but God allows it to happen; then I will appoint you a place where he shall flee.
- American Standard Version (ASV)
- And if a man lie not in wait, but God deliver [him] into his hand; then I will appoint thee a place whither he shall flee.
- Bible in Basic English (BBE)
- But if he had no evil purpose against him, and God gave him into his hand, I will give you a place to which he may go in flight.
- Darby Translation (DBY)
- But if he have not lain in wait, and God have delivered [him] into his hand, I will appoint thee a place to which he shall flee.
- Webster's Bible (WBS)
- And if a man shall not lie in wait, but God shall deliver [him] into his hand; then I will appoint thee a place whither he shall flee.
- Young's Literal Translation (YLT)
- as to him who hath not laid wait, and God hath brought to his hand, I have even set for thee a place whither he doth flee.
Read in context
- 11ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
- 12ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
- 13ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
- 14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- 15ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
Cross references
- Joshua 20:2–9 ಯೆಹೋಶುವ 20:2–9ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ. ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು. ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು. ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು. ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು. ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು. ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ. ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- 1 Samuel 24:18 1 ಸಮುವೇಲನು 24:18ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ.
- Deuteronomy 4:41–43 ಧರ್ಮೋಪದೇಶಕಾಂಡ 4:41–43ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು. ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು. ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- 1 Samuel 24:10 1 ಸಮುವೇಲನು 24:10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
- 1 Samuel 24:4 1 ಸಮುವೇಲನು 24:4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
- Deuteronomy 19:1–13 ಧರ್ಮೋಪದೇಶಕಾಂಡ 19:1–13ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು. ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ. ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ, ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು. ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು. ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- Numbers 35:10–34 ಅರಣ್ಯಕಾಂಡ 35:10–34ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು. ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು. ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು. ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು. ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು. ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು. ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು. ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು. ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ. ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ. ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು. ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು. ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು. ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು. ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ. ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Isaiah 10:7 ಯೆಶಾಯ 10:7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.