Exodus · chapter 21 · verse 14
Exodus 21:14 in Kannada
ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
Obbanu tanna nereyavanannu kollabekemba uddesha ittukondu mosatanadinda kondare avanu saayuvante neenu avanannu nanna yajnya vediyinda tegeyabeku.
Exodus 21:14 in English
- King James Version (KJV)
- But if a man come presumptuously upon his neighbour, to slay him with guile; thou shalt take him from mine altar, that he may die.
- World English Bible (WEB)
- If a man schemes and comes presumptuously on his neighbor to kill him, you shall take him from my altar, that he may die.
- American Standard Version (ASV)
- And if a man come presumptuously upon his neighbor, to slay him with guile; thou shalt take him from mine altar, that he may die.
- Bible in Basic English (BBE)
- But if a man makes an attack on his neighbour on purpose, to put him to death by deceit, you are to take him from my altar and put him to death.
- Darby Translation (DBY)
- But if a man act wantonly toward his neighbour, and slay him with guile, thou shalt take him from mine altar, that he may die.
- Webster's Bible (WBS)
- But if a man shall come presumptuously upon his neighbor, to slay him with guile; thou shalt take him from my altar, that he may die.
- Young's Literal Translation (YLT)
- 'And when a man doth presume against his neighbour to slay him with subtilty, from Mine altar thou dost take him to die.
Read in context
- 12ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
- 13ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
- 14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- 15ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
- 16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
Cross references
- 1 Kings 2:28–34 1 ಅರಸುಗಳು 2:28–34ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು. ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು. ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- Hebrews 10:26 ಇಬ್ರಿಯರಿಗೆ 10:26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
- Psalm 19:13 ಕೀರ್ತನೆಗಳು 19:13ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- Numbers 15:30–31 ಅರಣ್ಯಕಾಂಡ 15:30–31ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು. ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- Deuteronomy 17:12–13 ಧರ್ಮೋಪದೇಶಕಾಂಡ 17:12–13ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು; ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- 2 Kings 11:15 2 ಅರಸುಗಳು 11:15ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
- Deuteronomy 1:43 ಧರ್ಮೋಪದೇಶಕಾಂಡ 1:43ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.
- Deuteronomy 19:11–13 ಧರ್ಮೋಪದೇಶಕಾಂಡ 19:11–13ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- 1 Kings 1:50–51 1 ಅರಸುಗಳು 1:50–51ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು. ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.
- Numbers 35:20–21 ಅರಣ್ಯಕಾಂಡ 35:20–21ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.