Exodus · chapter 21 · verse 17
Exodus 21:17 in Kannada
ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
Tandegaadaroo taayigaadaroo shaapakotta vanu khanditavaagi saayabeku.
Exodus 21:17 in English
- King James Version (KJV)
- And he that curseth his father, or his mother, shall surely be put to death.
- World English Bible (WEB)
- “Anyone who curses his father or his mother shall surely be put to death.
- American Standard Version (ASV)
- And he that curseth his father or his mother, shall surely be put to death.
- Bible in Basic English (BBE)
- Any man cursing his father or his mother is to be put to death.
- Darby Translation (DBY)
- And he that curseth his father, or his mother, shall certainly be put to death.
- Webster's Bible (WBS)
- And he that curseth his father, or his mother, shall surely be put to death.
- Young's Literal Translation (YLT)
- 'And he who is reviling his father or his mother is certainly put to death.
Read in context
- 15ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
- 16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
- 17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
- 18ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
- 19ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
Cross references
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Mark 7:10–11 ಮಾರ್ಕನು 7:10–11ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
- Matthew 15:3–6 ಮತ್ತಾಯನು 15:3–6ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- Leviticus 20:9–10 ಯಾಜಕಕಾಂಡ 20:9–10ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು. ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.