Exodus · chapter 21 · verse 2
Exodus 21:2 in Kannada
ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
Neenu ibriya daasanannu kondukondare avanu aaru varusha ninage sevemaadabeku; elaneya varushadalli enoo kodade bidugadeyaagi avanu hogali.
Exodus 21:2 in English
- King James Version (KJV)
- If thou buy an Hebrew servant, six years he shall serve: and in the seventh he shall go out free for nothing.
- World English Bible (WEB)
- “If you buy a Hebrew servant, he shall serve six years, and in the seventh he shall go out free without paying anything.
- American Standard Version (ASV)
- If thou buy a Hebrew servant, six years he shall serve: and in the seventh he shall go out free for nothing.
- Bible in Basic English (BBE)
- If you get a Hebrew servant for money, he is to be your servant for six years, and in the seventh year you are to let him go free without payment.
- Darby Translation (DBY)
- If thou buy a Hebrew bondman, six years shall he serve; and in the seventh he shall go out free for nothing.
- Webster's Bible (WBS)
- If thou shalt buy a Hebrew servant, six years he shall serve: and in the seventh he shall depart free for nothing.
- Young's Literal Translation (YLT)
- 'When thou buyest a Hebrew servant — six years he doth serve, and in the seventh he goeth out as a freeman for nought;
Read in context
- 1ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.
- 2ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.
- 3ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
- 4ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
Cross references
- Deuteronomy 15:12–15 ಧರ್ಮೋಪದೇಶಕಾಂಡ 15:12–15ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು. ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ. ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು. ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- Deuteronomy 15:18 ಧರ್ಮೋಪದೇಶಕಾಂಡ 15:18ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- Exodus 12:44 ವಿಮೋಚನಕಾಂಡ 12:44ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
- Exodus 22:3 ವಿಮೋಚನಕಾಂಡ 22:3ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
- Leviticus 25:39–45 ಯಾಜಕಕಾಂಡ 25:39–45ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು. ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ. ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು. ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು. ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು. ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.
- Nehemiah 5:1–5 ನೆಹೆಮೀಯ 5:1–5ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು. ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- Deuteronomy 15:1 ಧರ್ಮೋಪದೇಶಕಾಂಡ 15:1ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು.
- Nehemiah 5:8 ನೆಹೆಮೀಯ 5:8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
- Jeremiah 34:8–17 ಯೆರೆಮೀಯ 34:8–17ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು. ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು. ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು. ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ-- ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
- Deuteronomy 31:10 ಧರ್ಮೋಪದೇಶಕಾಂಡ 31:10ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ
- Genesis 27:36 ಆದಿಕಾಂಡ 27:36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
- Genesis 27:28 ಆದಿಕಾಂಡ 27:28ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.