Exodus · chapter 23 · verse 15
Exodus 23:15 in Kannada
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
Huliyillada rottigala habbavannu aacharisabeku; (abeeb tingalina nemakavaada samayadalli elu dinagala varege naanu ninage aajnyaapisida prakaara huliyillada rottigalannu tinnabeku. Yaakandare neenu aa tingalalle aigupta dinda horage bandiddi. Obbaroo bareegaiyinda nanna sannidhiyalli kaanisikollabaaradu.)
Exodus 23:15 in English
- King James Version (KJV)
- Thou shalt keep the feast of unleavened bread: (thou shalt eat unleavened bread seven days, as I commanded thee, in the time appointed of the month Abib; for in it thou camest out from Egypt: and none shall appear before me empty:)
- World English Bible (WEB)
- You shall observe the feast of unleavened bread. Seven days you shall eat unleavened bread, as I commanded you, at the time appointed in the month Abib (for in it you came out of Egypt), and no one shall appear before me empty.
- American Standard Version (ASV)
- The feast of unleavened bread shalt thou keep: seven days thou shalt eat unleavened bread, as I commanded thee, at the time appointed in the month Abib (for in it thou camest out from Egypt); and none shall appear before me empty:
- Bible in Basic English (BBE)
- You are to keep the feast of unleavened bread; for seven days let your bread be without leaven, as I gave you orders, at the regular time in the month Abib (for in it you came out of Egypt); and let no one come before me without an offering:
- Darby Translation (DBY)
- Thou shalt keep the feast of unleavened bread, (thou shalt eat unleavened bread seven days, as I have commanded thee, in the time appointed of the month Abib; for in it thou camest out from Egypt; and none shall appear in my presence empty;)
- Webster's Bible (WBS)
- Thou shalt keep the feast of unleavened bread: (thou shalt eat unleavened bread seven days, as I commanded thee, in the time appointed of the month Abib; for in it thou camest out from Egypt: and none shall appear before me empty:)
- Young's Literal Translation (YLT)
- the Feast of Unleavened things thou dost keep; seven days thou dost eat unleavened things, as I have commanded thee, at the time appointed [in] the month of Abib; for in it thou hast come forth out of Egypt, and ye do not appear [in] My presence empty;
Read in context
- 13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
- 14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
- 15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- 16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- 17ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
Cross references
- Luke 22:7 ಲೂಕನು 22:7ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
- Exodus 34:20 ವಿಮೋಚನಕಾಂಡ 34:20ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Numbers 28:16–25 ಅರಣ್ಯಕಾಂಡ 28:16–25ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- 2 Kings 23:21–23 2 ಅರಸುಗಳು 23:21–23ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು. ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ. ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಯೆರೂಸ ಲೇಮಿನಲ್ಲಿ ಕರ್ತನಿಗೆ ಆಚರಿಸಲ್ಪಟ್ಟಿತು.
- Leviticus 23:5–8 ಯಾಜಕಕಾಂಡ 23:5–8ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Deuteronomy 16:1–8 ಧರ್ಮೋಪದೇಶಕಾಂಡ 16:1–8ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು; ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Exodus 13:4 ವಿಮೋಚನಕಾಂಡ 13:4ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.
- Exodus 12:14–28 ವಿಮೋಚನಕಾಂಡ 12:14–28ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು. ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ. ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು. ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು. ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು. ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು. ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು. ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
- Exodus 12:43–49 ವಿಮೋಚನಕಾಂಡ 12:43–49ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು. ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು. ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು. ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು. ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು. ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
Original words (Hebrew)
- keep · H8104שָׁמַר shâmar
- feast · H2282חַג chag
- bread · H4682מַצָּה matstsâh
- eat · H398אָכַל ʼâkal
- bread · H4682מַצָּה matstsâh
- seven · H7651שֶׁבַע shebaʻ
- days · H3117יוֹם yôwm
- commanded · H6680צָוָה tsâvâh
- appointed · H4150מוֹעֵד môwʻêd
- month · H2320חֹדֶשׁ chôdesh
- Abib · H24אָבִיב ʼâbîyb
- out · H3318יָצָא yâtsâʼ
- Egypt · H4714מִצְרַיִם Mitsrayim
- appear · H7200רָאָה râʼâh
- before · H6440פָּנִים pânîym
- empty · H7387רֵיקָם rêyqâm