Exodus · chapter 24 · verse 3
Exodus 24:3 in Kannada
ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
Mosheyu bandu kartana ellaa maatugalannoo ellaa nyaayavidhigalannoo janarige tiliyapadi sidanu; aaga janarellaa onde svaradinda--kartanu helida ellaa maatugala prakaara maadutteve endu uttarakottaru.
Exodus 24:3 in English
- King James Version (KJV)
- And Moses came and told the people all the words of the LORD, and all the judgments: and all the people answered with one voice, and said, All the words which the LORD hath said will we do.
- World English Bible (WEB)
- Moses came and told the people all the LORD’s words, and all the ordinances; and all the people answered with one voice, and said, “All the words which the LORD has spoken we will do.”
- American Standard Version (ASV)
- And Moses came and told the people all the words of Jehovah, and all the ordinances: and all the people answered with one voice, and said, All the words which Jehovah hath spoken will we do.
- Bible in Basic English (BBE)
- Then Moses came and put before the people all the words of the Lord and his laws: and all the people, answering with one voice, said, Whatever the Lord has said we will do.
- Darby Translation (DBY)
- And Moses came and told the people all the words of Jehovah, and all the judgments; and all the people answered with one voice, and said, All the words that Jehovah has said will we do!
- Webster's Bible (WBS)
- And Moses came and told the people all the words of the LORD, and all the judgments: and all the people answered with one voice, and said, All the words which the LORD hath said will we perform.
- Young's Literal Translation (YLT)
- And Moses cometh in, and recounteth to the people all the words of Jehovah, and all the judgments, and all the people answer — one voice, and say, 'All the words which Jehovah hath spoken we do.'
Read in context
- 1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- 2ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
- 3ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
- 4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- 5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
Cross references
- Exodus 19:8 ವಿಮೋಚನಕಾಂಡ 19:8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
- Exodus 24:7 ವಿಮೋಚನಕಾಂಡ 24:7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
- Joshua 24:22 ಯೆಹೋಶುವ 24:22ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.
- Deuteronomy 5:1 ಧರ್ಮೋಪದೇಶಕಾಂಡ 5:1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
- Deuteronomy 6:1 ಧರ್ಮೋಪದೇಶಕಾಂಡ 6:1ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Deuteronomy 4:1 ಧರ್ಮೋಪದೇಶಕಾಂಡ 4:1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- Deuteronomy 5:27–28 ಧರ್ಮೋಪದೇಶಕಾಂಡ 5:27–28ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
- Deuteronomy 11:1 ಧರ್ಮೋಪದೇಶಕಾಂಡ 11:1ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
- Galatians 3:19–20 ಗಲಾತ್ಯದವರಿಗೆ 3:19–20ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ.
- Exodus 21:1–23 ವಿಮೋಚನಕಾಂಡ 21:1–23ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ. ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ. ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು. ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು. ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು. ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು. ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ. ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು. ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು. ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು. ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು. ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು. ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು. ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು. ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು. ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು. ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು. ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು. ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು. ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು. ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
Original words (Hebrew)
- Moses · H4872מֹשֶׁה Môsheh
- came · H935בּוֹא bôwʼ
- told · H5608סָפַר çâphar
- people · H5971עַם ʻam
- words · H1697דָּבָר dâbâr
- judgments · H4941מִשְׁפָּט mishpâṭ
- people · H5971עַם ʻam
- answered · H6030עָנָה ʻânâh
- one · H259אֶחָד ʼechâd
- voice · H6963קוֹל qôwl
- said · H559אָמַר ʼâmar
- words · H1697דָּבָר dâbâr
- said · H1696דָבַר dâbar
- do · H6213עָשָׂה ʻâsâh