Exodus · chapter 25 · verse 16
Exodus 25:16 in Kannada
ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
Naanu ninage koduva saakshiya halage galannu manjooshadalli idabeku.
Exodus 25:16 in English
- King James Version (KJV)
- And thou shalt put into the ark the testimony which I shall give thee.
- World English Bible (WEB)
- You shall put the covenant which I shall give you into the ark.
- American Standard Version (ASV)
- And thou shalt put into the ark the testimony which I shall give thee.
- Bible in Basic English (BBE)
- Inside the ark you are to put the record which I will give you.
- Darby Translation (DBY)
- And thou shalt put into the ark the testimony that I shall give thee.
- Webster's Bible (WBS)
- And thou shalt put into the ark the testimony which I shall give thee.
- Young's Literal Translation (YLT)
- and thou hast put unto the ark the testimony which I give unto thee.
Read in context
- 14ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
- 15ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
- 16ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
- 17ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
- 18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
Cross references
- 1 Kings 8:9 1 ಅರಸುಗಳು 8:9ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
- Deuteronomy 31:26 ಧರ್ಮೋಪದೇಶಕಾಂಡ 31:26ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- Hebrews 9:4 ಇಬ್ರಿಯರಿಗೆ 9:4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- Exodus 16:34 ವಿಮೋಚನಕಾಂಡ 16:34ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು.
- Numbers 17:4 ಅರಣ್ಯಕಾಂಡ 17:4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Exodus 38:21 ವಿಮೋಚನಕಾಂಡ 38:21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
- Exodus 32:15 ವಿಮೋಚನಕಾಂಡ 32:15ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
- Exodus 27:21 ವಿಮೋಚನಕಾಂಡ 27:21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- Exodus 30:6 ವಿಮೋಚನಕಾಂಡ 30:6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
- Exodus 34:29 ವಿಮೋಚನಕಾಂಡ 34:29ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
- 2 Chronicles 34:14–15 2 ಪೂರ್ವಕಾಲವೃತ್ತಾಂತ 34:14–15ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು. ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.