Exodus · chapter 25 · verse 18
Exodus 25:18 in Kannada
ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
Bangaaradinda eradu keroobigalannu naksheya kelasadinda karunaa sanada eradu badigalalli maadisabeku.
Exodus 25:18 in English
- King James Version (KJV)
- And thou shalt make two cherubims [of] gold, [of] beaten work shalt thou make them, in the two ends of the mercy seat.
- World English Bible (WEB)
- You shall make two cherubim of hammered gold. You shall make them at the two ends of the mercy seat.
- American Standard Version (ASV)
- And thou shalt make two cherubim of gold; of beaten work shalt thou make them, at the two ends of the mercy-seat.
- Bible in Basic English (BBE)
- And at the two ends of the cover you are to make two winged ones of hammered gold,
- Darby Translation (DBY)
- And thou shalt make two cherubim of gold; [of] beaten work shalt thou make them, at the two ends of the mercy-seat.
- Webster's Bible (WBS)
- And thou shalt make two cherubim [of] gold, [of] beaten work shalt thou make them, in the two ends of the mercy-seat.
- Young's Literal Translation (YLT)
- and thou hast made two cherubs of gold, beaten work dost thou make them, at the two ends of the mercy-seat;
Read in context
- 16ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.
- 17ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
- 18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- 19ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
- 20ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
Cross references
- Ezekiel 10:20 ಯೆಹೆಜ್ಕೇಲನು 10:20ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- Ezekiel 10:2 ಯೆಹೆಜ್ಕೇಲನು 10:2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
- 1 Kings 8:6–7 1 ಅರಸುಗಳು 8:6–7ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು. ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
- 1 Chronicles 28:18 1 ಪೂರ್ವಕಾಲವೃತ್ತಾಂತ 28:18ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
- Exodus 37:7–9 ವಿಮೋಚನಕಾಂಡ 37:7–9ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
- Ezekiel 41:18–19 ಯೆಹೆಜ್ಕೇಲನು 41:18–19ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ. ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.
- Genesis 3:24 ಆದಿಕಾಂಡ 3:24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- 1 Samuel 4:4 1 ಸಮುವೇಲನು 4:4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- 1 Kings 6:23–28 1 ಅರಸುಗಳು 6:23–28ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು. ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು. ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು. ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು. ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು.