Exodus · chapter 25 · verse 2
Exodus 25:2 in Kannada
ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
Nanage kaanikegalannu takkondu baru vante israayel makkala sangada maatanaadu; manahpoorvakavaagiyoo hrudayapoorvakavaa giyoo koduva nanna kaanikeyannu neevu tegedu kollabeku.
Exodus 25:2 in English
- King James Version (KJV)
- Speak unto the children of Israel, that they bring me an offering: of every man that giveth it willingly with his heart ye shall take my offering.
- World English Bible (WEB)
- “Speak to the children of Israel, that they take an offering for me. From everyone whose heart makes him willing you shall take my offering.
- American Standard Version (ASV)
- Speak unto the children of Israel, that they take for me an offering: of every man whose heart maketh him willing ye shall take my offering.
- Bible in Basic English (BBE)
- Say to the children of Israel that they are to make me an offering; from every man who has the impulse in his heart take an offering for me.
- Darby Translation (DBY)
- Speak unto the children of Israel, that they bring me a heave-offering: of every one whose heart prompteth him, ye shall take my heave-offering.
- Webster's Bible (WBS)
- Speak to the children of Israel, that they bring me an offering: of every man that giveth it willingly with his heart ye shall take my offering.
- Young's Literal Translation (YLT)
- 'Speak unto the sons of Israel, and they take for Me a heave-offering; from every man whose heart impelleth him ye do take My heave-offering.
Read in context
- 1ಆಗ ಕರ್ತನು ಮಾತನಾಡಿ ಮೋಶೆಗೆ--
- 2ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
- 3ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ
- 4ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
Cross references
- 2 Corinthians 9:7 2 ಕೊರಿಂಥದವರಿಗೆ 9:7ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
- Nehemiah 11:2 ನೆಹೆಮೀಯ 11:2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
- Ezra 2:68 ಎಜ್ರನು 2:68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
- Ezra 7:16 ಎಜ್ರನು 7:16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
- Ezra 1:6 ಎಜ್ರನು 1:6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
- Ezra 3:5 ಎಜ್ರನು 3:5ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- 1 Chronicles 29:1–30 1 ಪೂರ್ವಕಾಲವೃತ್ತಾಂತ 29:1–30ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ. ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ. ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ. ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು. ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು. ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು. ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು. ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು. ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು. ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು. ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು. ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು. ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು. ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು. ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು. ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು. ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ. ಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
- Numbers 18:24 ಅರಣ್ಯಕಾಂಡ 18:24ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- Deuteronomy 16:16–17 ಧರ್ಮೋಪದೇಶಕಾಂಡ 16:16–17ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- Judges 5:9 ನ್ಯಾಯಸ್ಥಾಪಕರು 5:9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- Numbers 7:3–88 ಅರಣ್ಯಕಾಂಡ 7:3–88ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು. ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು. ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು. ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು. ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು. ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು. ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು. ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು. ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು. ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು. ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು. ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ-- ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು. ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು. ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು. ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು. ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು. ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು. ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು. ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು. ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು. ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು. ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು. ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು. ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು. ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ. ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು. ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್; ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು, ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.