Exodus · chapter 25 · verse 29
Exodus 25:29 in Kannada
ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
Idallade neenu paatregalannoo sautugalannoo muchchalagalannoo battalugalannoo oyyuvadakkoskara shuddha bangaara dinda maadabeku.
Exodus 25:29 in English
- King James Version (KJV)
- And thou shalt make the dishes thereof, and spoons thereof, and covers thereof, and bowls thereof, to cover withal: [of] pure gold shalt thou make them.
- World English Bible (WEB)
- You shall make its dishes, its spoons, its ladles, and its bowls with which to pour out offerings. You shall make them of pure gold.
- American Standard Version (ASV)
- And thou shalt make the dishes thereof, and the spoons thereof, and the flagons thereof, and the bowls thereof, wherewith to pour out: of pure gold shalt thou make them.
- Bible in Basic English (BBE)
- And make the table-vessels, the spoons and the cups and the basins for liquids, all of the best gold.
- Darby Translation (DBY)
- And thou shalt make the dishes thereof, and cups thereof, and goblets thereof, and bowls thereof, with which to pour out: of pure gold shalt thou make them.
- Webster's Bible (WBS)
- And thou shalt make its dishes, and its spoons, and its covers, and its bowls, to cover it with: [of] pure gold shalt thou make them.
- Young's Literal Translation (YLT)
- and thou hast made its dishes, and its bowls, and its covers, and its cups, with which they pour out; of pure gold thou dost make them;
Read in context
- 27ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.
- 28ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
- 29ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
- 30ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- 31ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
Cross references
- Numbers 4:7 ಅರಣ್ಯಕಾಂಡ 4:7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
- Exodus 37:16 ವಿಮೋಚನಕಾಂಡ 37:16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Ezra 1:9–11 ಎಜ್ರನು 1:9–11ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
- Numbers 7:13 ಅರಣ್ಯಕಾಂಡ 7:13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- Song of Solomon 5:1 ಪರಮಗೀತೆ 5:1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- 2 Chronicles 4:22 2 ಪೂರ್ವಕಾಲವೃತ್ತಾಂತ 4:22ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
- Numbers 7:19 ಅರಣ್ಯಕಾಂಡ 7:19ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 1 Kings 7:50 1 ಅರಸುಗಳು 7:50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Leviticus 24:5–9 ಯಾಜಕಕಾಂಡ 24:5–9ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- Jeremiah 52:18–19 ಯೆರೆಮೀಯ 52:18–19ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- Numbers 7:31–33 ಅರಣ್ಯಕಾಂಡ 7:31–33ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.