Exodus · chapter 26 · verse 15
Exodus 26:15 in Kannada
ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
Gudaarakke jaalee maradinda nilluva halige galannu maadabeku.
Exodus 26:15 in English
- King James Version (KJV)
- And thou shalt make boards for the tabernacle [of] shittim wood standing up.
- World English Bible (WEB)
- “You shall make the boards for the tabernacle of acacia wood, standing upright.
- American Standard Version (ASV)
- And thou shalt make the boards for the tabernacle of acacia wood, standing up.
- Bible in Basic English (BBE)
- And you are to make upright boards of hard wood for the House.
- Darby Translation (DBY)
- And the boards for the tabernacle thou shalt make of acacia-wood, standing up;
- Webster's Bible (WBS)
- And thou shalt make boards for the tabernacle [of] shittim wood standing up.
- Young's Literal Translation (YLT)
- 'And thou hast made the boards for the tabernacle, of shittim wood, standing up;
Read in context
- 13ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
- 14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
- 15ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
- 16ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು.
- 17ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
Cross references
- Exodus 36:20–33 ವಿಮೋಚನಕಾಂಡ 36:20–33ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು. ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು. ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು. ಅವನು ಗುಡಾರಕ್ಕೋಸ್ಕರ ಹಲಗೆ ಗಳನ್ನು ಮಾಡಿದನು. ದಕ್ಷಿಣ ದಿಕ್ಕಿಗೆ ದಕ್ಷಿಣಭಾಗಕ್ಕೆ ಇಪ್ಪತ್ತು ಹಲಗೆಗಳನ್ನು ಮಾಡಿದನು. ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು. ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು. ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು. ಅವನು ಗುಡಾರದ ಎರಡು ಪಾರ್ಶ್ವಗಳಲ್ಲಿ ರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡಿದನು. ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು. ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು. ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು. ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.
- Exodus 25:5 ವಿಮೋಚನಕಾಂಡ 25:5ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
- Exodus 26:22–29 ವಿಮೋಚನಕಾಂಡ 26:22–29ಗುಡಾರದ ಪಶ್ಚಿಮದ ಕಡೆಗೆ ಆರು ಹಲಗೆಗಳನ್ನೂ ಮಾಡಬೇಕು. ಗುಡಾರದ ಉಭಯ ಪಾರ್ಶ್ವಗಳ ಲ್ಲಿರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡ ಬೇಕು. ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು. ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು. ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು. ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯ ವರೆಗೆ ಮುಟ್ಟಿರಬೇಕು. ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
- Exodus 40:17–18 ವಿಮೋಚನಕಾಂಡ 40:17–18ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು. ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
- Ephesians 2:20–21 ಎಫೆಸದವರಿಗೆ 2:20–21ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Exodus 26:18 ವಿಮೋಚನಕಾಂಡ 26:18ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು.
- Numbers 4:31–32 ಅರಣ್ಯಕಾಂಡ 4:31–32ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.