Exodus · chapter 28 · verse 1
Exodus 28:1 in Kannada
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
Idallade nanage yaajakana sevemaaduvadakke neenu ninna annanaada aaronanannoo avana makkalaada naadaab abeehoo eliyejar eetaamaar embavarannoo israayel makkalinda ninna hattira baramaada beku.
Exodus 28:1 in English
- King James Version (KJV)
- And take thou unto thee Aaron thy brother, and his sons with him, from among the children of Israel, that he may minister unto me in the priest’s office, [even] Aaron, Nadab and Abihu, Eleazar and Ithamar, Aaron’s sons.
- World English Bible (WEB)
- “Bring Aaron your brother, and his sons with him, near to you from among the children of Israel, that he may minister to me in the priest’s office: Aaron, with Nadab, Abihu, Eleazar, and Ithamar, Aaron’s sons.
- American Standard Version (ASV)
- And bring thou near unto thee Aaron thy brother, and his sons with him, from among the children of Israel, that he may minister unto me in the priest’s office, even Aaron, Nadab and Abihu, Eleazar and Ithamar, Aaron’s sons.
- Bible in Basic English (BBE)
- Now let Aaron your brother, and his sons with him, come near from among the children of Israel, so that they may be my priests, even Aaron, and Nadab, Abihu, Eleazar, and Ithamar, his sons.
- Darby Translation (DBY)
- And thou shalt take thee Aaron thy brother, and his sons with him, from among the children of Israel, that he may serve me as priest — Aaron, Nadab and Abihu, Eleazar and Ithamar, Aaron's sons.
- Webster's Bible (WBS)
- And take thou to thee Aaron thy brother, and his sons with him, from among the children of Israel, that he may minister to me in the priest's office, [even] Aaron, Nadab and Abihu, Eleazar and Ithamar, Aaron's sons.
- Young's Literal Translation (YLT)
- 'And thou, bring thou near unto thee Aaron thy brother, and his sons with him, from the midst of the sons of Israel, for his being priest to Me, [even] Aaron, Nadab, and Abihu, Eleazar and Ithamar, sons of Aaron;
Read in context
- 1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
- 2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
- 3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
Cross references
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Hebrews 5:1–5 ಇಬ್ರಿಯರಿಗೆ 5:1–5ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು. ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು. ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ. ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
- 1 Chronicles 6:10 1 ಪೂರ್ವಕಾಲವೃತ್ತಾಂತ 6:10ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
- Numbers 16:9–11 ಅರಣ್ಯಕಾಂಡ 16:9–11ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ? ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
- Deuteronomy 10:6 ಧರ್ಮೋಪದೇಶಕಾಂಡ 10:6ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
- 2 Chronicles 26:18–21 2 ಪೂರ್ವಕಾಲವೃತ್ತಾಂತ 26:18–21ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- Numbers 26:61 ಅರಣ್ಯಕಾಂಡ 26:61ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.
- Numbers 17:2–9 ಅರಣ್ಯಕಾಂಡ 17:2–9ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ. ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು. ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು. ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು. ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು. ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
- Exodus 31:10 ವಿಮೋಚನಕಾಂಡ 31:10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
- Exodus 28:41 ವಿಮೋಚನಕಾಂಡ 28:41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
- 1 Chronicles 24:1–4 1 ಪೂರ್ವಕಾಲವೃತ್ತಾಂತ 24:1–4ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
- Exodus 24:1 ವಿಮೋಚನಕಾಂಡ 24:1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
Original words (Hebrew)
- take · H7126קָרַב qârab
- Aaron · H175אַהֲרוֹן ʼAhărôwn
- brother · H251אָח ʼâch
- sons · H1121בֵּן bên
- among · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl
- priest’s office · H3547כָּהַן kâhan
- Aaron · H175אַהֲרוֹן ʼAhărôwn
- Nadab · H5070נָדָב Nâdâb
- Abihu · H30אֲבִיהוּא ʼĂbîyhûwʼ
- Eleazar · H499אֶלְעָזָר ʼElʻâzâr
- Ithamar · H385אִיתָמָר ʼÎythâmâr
- Aaron’s · H175אַהֲרוֹן ʼAhărôwn
- sons · H1121בֵּן bên