Exodus · chapter 28 · verse 41
Exodus 28:41 in Kannada
ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
Avugalannu ninna sahodaranaada aarona nigoo avana kumaararigoo todisi avarannu abhishekisi pratishthemaadu. Avaru nanage yaajaka sevemaaduva haage avarannu shuddhamaadu.
Exodus 28:41 in English
- King James Version (KJV)
- And thou shalt put them upon Aaron thy brother, and his sons with him; and shalt anoint them, and consecrate them, and sanctify them, that they may minister unto me in the priest’s office.
- World English Bible (WEB)
- You shall put them on Aaron your brother, and on his sons with him, and shall anoint them, and consecrate them, and sanctify them, that they may minister to me in the priest’s office.
- American Standard Version (ASV)
- And thou shalt put them upon Aaron thy brother, and upon his sons with him, and shalt anoint them, and consecrate them, and sanctify them, that they may minister unto me in the priest’s office.
- Bible in Basic English (BBE)
- These you are to put on Aaron, your brother, and on his sons, putting oil on them, separating them and making them holy, to do the work of priests to me.
- Darby Translation (DBY)
- And thou shalt clothe with them Aaron thy brother, and his sons with him; and shalt anoint them, and consecrate them, and hallow them, that they may serve me as priests.
- Webster's Bible (WBS)
- And thou shalt put them upon Aaron thy brother, and on his sons with him: and shalt anoint them, and consecrate them, and sanctify them, that they may minister to me in the priest's office.
- Young's Literal Translation (YLT)
- and thou hast clothed Aaron thy brother with them, and his sons with him, and hast anointed them, and hast consecrated their hand, and hast sanctified them, and they have been priests to Me.
Read in context
- 39ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
- 40ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
- 41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
- 42ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- 43ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
Cross references
- Exodus 29:7 ವಿಮೋಚನಕಾಂಡ 29:7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Leviticus 8:1–36 ಯಾಜಕಕಾಂಡ 8:1–36ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು. ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು. ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ. ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು. ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು. ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು. ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು. ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು. ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು. ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು. ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು. ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು. ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು. ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು. ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು. ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು. ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು. ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು. ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು. ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು. ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು. ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು. ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ. ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು. ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Exodus 40:15 ವಿಮೋಚನಕಾಂಡ 40:15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- Leviticus 10:7 ಯಾಜಕಕಾಂಡ 10:7ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.
- Exodus 29:9 ವಿಮೋಚನಕಾಂಡ 29:9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- Hebrews 7:28 ಇಬ್ರಿಯರಿಗೆ 7:28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Isaiah 10:27 ಯೆಶಾಯ 10:27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- Exodus 29:24 ವಿಮೋಚನಕಾಂಡ 29:24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 2 Corinthians 1:21–22 2 ಕೊರಿಂಥದವರಿಗೆ 1:21–22ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ; ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Exodus 30:23–30 ವಿಮೋಚನಕಾಂಡ 30:23–30ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.