Exodus · chapter 29 · verse 30
Exodus 29:30 in Kannada
ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
Avana badalaagi avana maganu yaajakatvavannu nadisi parishuddha sthaladalli sevemaaduvante baruvadakkiruvavanu avugalannu elu dinagala varege tottukollabeku.
Exodus 29:30 in English
- King James Version (KJV)
- [And] that son that is priest in his stead shall put them on seven days, when he cometh into the tabernacle of the congregation to minister in the holy [place].
- World English Bible (WEB)
- Seven days shall the son who is priest in his place put them on, when he comes into the Tent of Meeting to minister in the holy place.
- American Standard Version (ASV)
- Seven days shall the son that is priest in his stead put them on, when he cometh into the tent of meeting to minister in the holy place.
- Bible in Basic English (BBE)
- For seven days the son who becomes priest in his place will put them on when he comes into the Tent of meeting to do the work of the holy place.
- Darby Translation (DBY)
- The son that is priest in his stead shall put them on seven days, when he cometh into the tent of meeting to serve in the sanctuary.
- Webster's Bible (WBS)
- [And] that son, that is priest in his stead, shall put them on seven days, when he cometh into the tabernacle of the congregation to minister in the holy [place].
- Young's Literal Translation (YLT)
- seven days doth the priest in his stead (of his sons) put them on, when he goeth in unto the tent of meeting, to minister in the sanctuary.
Read in context
- 28ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
- 29ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.
- 30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
- 31ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
- 32ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
Cross references
- Numbers 20:28 ಅರಣ್ಯಕಾಂಡ 20:28ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Leviticus 8:33–35 ಯಾಜಕಕಾಂಡ 8:33–35ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು. ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ. ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Joshua 6:14–15 ಯೆಹೋಶುವ 6:14–15ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು. ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
- Ezekiel 43:26 ಯೆಹೆಜ್ಕೇಲನು 43:26ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Exodus 29:35 ವಿಮೋಚನಕಾಂಡ 29:35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- Genesis 8:10 ಆದಿಕಾಂಡ 8:10ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
- Leviticus 9:8 ಯಾಜಕಕಾಂಡ 9:8ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
- Leviticus 9:1 ಯಾಜಕಕಾಂಡ 9:1ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
- Exodus 12:15 ವಿಮೋಚನಕಾಂಡ 12:15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Leviticus 13:5 ಯಾಜಕಕಾಂಡ 13:5ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
- Leviticus 12:2–3 ಯಾಜಕಕಾಂಡ 12:2–3ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು. ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.