Exodus · chapter 29 · verse 33
Exodus 29:33 in Kannada
ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
Ava rannu pratishthemaaduvadakkoskara mattu parishuddha maaduvadakkoskara avarigaagi praayashchitta maadi davugalannu avare ootamaadabeku. Anyaru avugalannu unnabaaradu, yaakandare avugalu parishuddhavaadavugalu.
Exodus 29:33 in English
- King James Version (KJV)
- And they shall eat those things wherewith the atonement was made, to consecrate [and] to sanctify them: but a stranger shall not eat [thereof], because they [are] holy.
- World English Bible (WEB)
- They shall eat those things with which atonement was made, to consecrate and sanctify them; but a stranger shall not eat of it, because they are holy.
- American Standard Version (ASV)
- And they shall eat those things wherewith atonement was made, to consecrate [and] to sanctify them: but a stranger shall not eat thereof, because they are holy.
- Bible in Basic English (BBE)
- All those things which were used as offerings to take away sin, and to make them holy to be priests, they may have for food: but no one who is not a priest may have them, for they are holy food.
- Darby Translation (DBY)
- They shall eat the things with which the atonement was made, to consecrate [and] to hallow them; but a stranger shall not eat [of them], for they are holy.
- Webster's Bible (WBS)
- And they shall eat those things with which the atonement was made, to consecrate [and] to sanctify them: but a stranger shall not eat [of them], because they [are] holy.
- Young's Literal Translation (YLT)
- and they have eaten those things by which there is atonement to consecrate their hand, to sanctify them; and a stranger doth not eat — for they [are] holy;
Read in context
- 31ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
- 32ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
- 33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
- 34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
- 35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
Cross references
- Numbers 18:4 ಅರಣ್ಯಕಾಂಡ 18:4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Leviticus 10:13–18 ಯಾಜಕಕಾಂಡ 10:13–18ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ. ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ. ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ. ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ-- ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ? ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Leviticus 22:10–13 ಯಾಜಕಕಾಂಡ 22:10–13ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ. ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- John 6:53–55 ಯೋಹಾನನು 6:53–55ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
- 1 Corinthians 11:26 1 ಕೊರಿಂಥದವರಿಗೆ 11:26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
- Psalm 22:26 ಕೀರ್ತನೆಗಳು 22:26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.