Exodus · chapter 29 · verse 35
Exodus 29:35 in Kannada
ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
Heege aaronanigoo avana kumaararigoo naanu ninage aajnyaapisida ellavugala prakaara nadisi elu divasa avarannu pratishthemaadabeku.
Exodus 29:35 in English
- King James Version (KJV)
- And thus shalt thou do unto Aaron, and to his sons, according to all [things] which I have commanded thee: seven days shalt thou consecrate them.
- World English Bible (WEB)
- “You shall do so to Aaron and to his sons, according to all that I have commanded you. You shall consecrate them seven days.
- American Standard Version (ASV)
- And thus shalt thou do unto Aaron, and to his sons, according to all that I have commanded thee: seven days shalt thou consecrate them.
- Bible in Basic English (BBE)
- All these things you are to do to Aaron and his sons as I have given you orders: for seven days the work of making them priests is to go on.
- Darby Translation (DBY)
- And thus shalt thou do to Aaron, and to his sons, according to all that I have commanded thee: seven days shalt thou consecrate them.
- Webster's Bible (WBS)
- And thus shalt thou do to Aaron, and to his sons, according to all [things] which I have commanded thee: seven days shalt thou consecrate them.
- Young's Literal Translation (YLT)
- 'And thou hast done thus to Aaron and to his sons, according to all that I have commanded thee; seven days thou dost consecrate their hand;
Read in context
- 33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
- 34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
- 35ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
- 36ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
- 37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
Cross references
- Exodus 40:12–16 ವಿಮೋಚನಕಾಂಡ 40:12–16ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು. ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು. ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- Exodus 39:42–43 ವಿಮೋಚನಕಾಂಡ 39:42–43ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು. ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- John 16:14 ಯೋಹಾನನು 16:14ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
- Leviticus 8:4–36 ಯಾಜಕಕಾಂಡ 8:4–36ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು. ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ. ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು. ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು. ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು. ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು. ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು. ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು. ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು. ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು. ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು. ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು. ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು. ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು. ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು. ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು. ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು. ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು. ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು. ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು. ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು. ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ. ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು. ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Exodus 29:37 ವಿಮೋಚನಕಾಂಡ 29:37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Exodus 29:30 ವಿಮೋಚನಕಾಂಡ 29:30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
- Leviticus 14:8–11 ಯಾಜಕಕಾಂಡ 14:8–11ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು. ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.