Exodus · chapter 29 · verse 43
Exodus 29:43 in Kannada
ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
Alli naanu israayel makkalannu sandhisuvenu. Gudaaravu nanna mahimeyinda pavitravaaguvadu.
Exodus 29:43 in English
- King James Version (KJV)
- And there I will meet with the children of Israel, and [the tabernacle] shall be sanctified by my glory.
- World English Bible (WEB)
- There I will meet with the children of Israel; and the place shall be sanctified by my glory.
- American Standard Version (ASV)
- And there I will meet with the children of Israel; and [the Tent] shall be sanctified by my glory.
- Bible in Basic English (BBE)
- There I will come face to face with the children of Israel, and the Tent will be made holy by my glory
- Darby Translation (DBY)
- And there will I meet with the children of Israel; and it shall be hallowed by my glory.
- Webster's Bible (WBS)
- And there I will meet with the children of Israel, and [the tabernacle] shall be sanctified by my glory.
- Young's Literal Translation (YLT)
- and I have met there with the sons of Israel, and it hath been sanctified by My honour.
Read in context
- 41ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
- 42ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- 43ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
- 44ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
- 45ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
Cross references
- 1 Kings 8:11 1 ಅರಸುಗಳು 8:11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- Ezekiel 43:5 ಯೆಹೆಜ್ಕೇಲನು 43:5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- 2 Chronicles 7:1–3 2 ಪೂರ್ವಕಾಲವೃತ್ತಾಂತ 7:1–3ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು. ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- Exodus 40:34 ವಿಮೋಚನಕಾಂಡ 40:34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
- 2 Chronicles 5:14 2 ಪೂರ್ವಕಾಲವೃತ್ತಾಂತ 5:14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- Haggai 2:7–9 ಹಗ್ಗಾಯ 2:7–9ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- Isaiah 6:1–3 ಯೆಶಾಯ 6:1–3ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Revelation 21:22–23 ಪ್ರಕಟನೆ 21:22–23ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.