Exodus · chapter 3 · verse 19
Exodus 3:19 in Kannada
ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
Aadaagyoo neeveshtu balavanta maadidaroo aiguptada arasanu nimmannu hogagodisuvadillavendu nanage nishchayavaagi tilidade.
Exodus 3:19 in English
- King James Version (KJV)
- And I am sure that the king of Egypt will not let you go, no, not by a mighty hand.
- World English Bible (WEB)
- I know that the king of Egypt won’t give you permission to go, no, not by a mighty hand.
- American Standard Version (ASV)
- And I know that the king of Egypt will not give you leave to go, no, not by a mighty hand.
- Bible in Basic English (BBE)
- And I am certain that the king of Egypt will not let you go without being forced.
- Darby Translation (DBY)
- But I know that the king of Egypt will not let you go, no, not by a powerful hand.
- Webster's Bible (WBS)
- And I am sure that the king of Egypt will not let you go, no, not by a mighty hand.
- Young's Literal Translation (YLT)
- 'And I — I have known that the king of Egypt doth not permit you to go, unless by a strong hand,
Read in context
- 17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- 18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- 19ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
- 20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- 21ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
Cross references
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Exodus 6:1 ವಿಮೋಚನಕಾಂಡ 6:1ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
- Exodus 7:1–14 ವಿಮೋಚನಕಾಂಡ 7:1–14ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು. ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು. ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು. ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು. ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು. ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು. ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ-- ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು. ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು. ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Isaiah 63:12–13 ಯೆಶಾಯ 63:12–13ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- Psalm 136:11–12 ಕೀರ್ತನೆಗಳು 136:11–12ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.