Exodus · chapter 30 · verse 1
Exodus 30:1 in Kannada
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
Neenu dhoopa suduva vediyannu maadabeku; jaalee maradinda adannu maadabeku.
Exodus 30:1 in English
- King James Version (KJV)
- And thou shalt make an altar to burn incense upon: [of] shittim wood shalt thou make it.
- World English Bible (WEB)
- “You shall make an altar to burn incense on. You shall make it of acacia wood.
- American Standard Version (ASV)
- And thou shalt make an altar to burn incense upon: of acacia wood shalt thou make it.
- Bible in Basic English (BBE)
- And you are to make an altar for the burning of perfume; of hard wood let it be made.
- Darby Translation (DBY)
- And thou shalt make an altar for the burning of incense: of acacia-wood shalt thou make it;
- Webster's Bible (WBS)
- And thou shalt make an altar to burn incense upon: [of] shittim wood shalt thou make it.
- Young's Literal Translation (YLT)
- 'And thou hast made an altar [for] making perfume; [of] shittim wood thou dost make it;
Read in context
- 1ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
- 2ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
- 3ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
Cross references
- Revelation 8:3 ಪ್ರಕಟನೆ 8:3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
- Exodus 37:25–28 ವಿಮೋಚನಕಾಂಡ 37:25–28ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Leviticus 4:7 ಯಾಜಕಕಾಂಡ 4:7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Exodus 40:5 ವಿಮೋಚನಕಾಂಡ 40:5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
- Exodus 30:7–8 ವಿಮೋಚನಕಾಂಡ 30:7–8ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
- 1 Kings 6:20 1 ಅರಸುಗಳು 6:20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
- Leviticus 4:18 ಯಾಜಕಕಾಂಡ 4:18ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- 2 Chronicles 26:16 2 ಪೂರ್ವಕಾಲವೃತ್ತಾಂತ 26:16ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
- Exodus 30:10 ವಿಮೋಚನಕಾಂಡ 30:10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.